DistrictsHassanKarnatakaLatestMain Post

ರಸ್ತೆ ಬದಿಗೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ – ಐವರಿಗೆ ಗಾಯ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು, ಐವರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‍ನಲ್ಲಿ 12 ಮಂದಿ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೆಎಸ್‌ಆರ್‌ಟಿಸಿ ಬಸ್, ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಇದನ್ನು ಓದಿ : ವಾಣಿಜ್ಯ ಮಂಡಳಿ ಅಧ್ಯಕ್ಷರ ಕೈಗೆ ಫಿನಾಯಿಲ್ ಮತ್ತು ಪೊರಕೆ ಕೊಟ್ಟ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ಈ ವೇಳೆ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು, ಬೇಲೂರು ಹಾಗೂ ಹಾಸನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನು ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

Leave a Reply

Your email address will not be published.

Back to top button