ಕೆರೆಗೆ ಉರುಳಿ 3 ಪಲ್ಟಿ ಹೊಡೆದ 20 ಪ್ರಯಾಣಿಕರಿದ್ದ KSRTC ಬಸ್

Public TV
1 Min Read
TMK BUS copy

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್ ಟಿಸಿ ಬಸ್ ಕೆರೆಗೆ ಬಿದ್ದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಶಿರಾ ತಾಲೂಕಿನ ಕಲ್ಲಳ್ಳಿಯಲ್ಲಿ ಬಳಿ ಈ ಅವಘಡ ಸಂಭವಿಸಿದೆ. ಕೆಎಸ್‍ಆರ್ ಟಿಸಿ ಬಸ್ ಶಿರಾದಿಂದ ಕಲ್ಲಳ್ಳಿಗೆ ಹೊರಟಿತ್ತು. ಮಾರ್ಗ ಮಧ್ಯೆ ಕಲ್ಲಳ್ಳಿ ಸಮೀಪ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ಮೇಲಿಂದ ಉರುಳಿದೆ. ಪರಿಣಾಮ ಬಸ್ ಮೂರು ಪಲ್ಟಿ ಹೊಡೆದಿದೆ.

TMK BUS PALTI AV 1

ಈ ಬಸ್ಸಿನಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಈ ಅವಘಡದಿಂದ ಎಲ್ಲರಿಗೂ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಕೆರೆಯಲ್ಲಿ ನೀರು ಇಲ್ಲದೆ ಇದ್ದುದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಈ ಘಟನೆ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *