Karnataka

ಬಸ್ ಪಲ್ಟಿ- ಪ್ರಯಾಣಿಕರಿಗೆ ಗಂಭೀರ ಗಾಯ

Published

on

Share this

ಯಾದಗಿರಿ: ಸುರಪುರದಿಂದ ಯಾದಗಿರಿಗೆ ಬರುತ್ತಿದ್ದ ಕೆಎಸ್‍ಆರ್ ಟಿಸಿ ಬಸ್ ಏಕಾಏಕಿ ಪಲ್ಟಿಯಾಗಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಶಹಾಪುರ ತಾಲೂಕಿನ ಅನವಾರದ ಬಳಿ ಈ ಅವಘಡ ಸಂಭವಿಸಿದೆ. ಸುಮಾರು 10 ಹತ್ತು ಪ್ರಯಾಣಿಕರಿಗೆ ಕೈ-ಕಾಲು ಮುರಿದಿವೆ. ಇನ್ನೂಳಿದ ಪ್ರಯಾಣಿಕರಿಗೆ ಒಳಪೆಟ್ಟು ಸೇರಿದಂತೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಬೈಕ್‍ಗಳಲ್ಲಿ ಐಫೋನ್ ಬಳಸಬೇಡಿ – ಗ್ರಾಹಕರಿಗೆ ಆಪಲ್ ಎಚ್ಚರಿಕೆ

ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಪಲ್ಟಿಗೆ ಯಾವುದೇ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಶಹಾಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement