ಚಿಕ್ಕಮಗಳೂರು: ಸಾರಿಗೆ ಬಸ್ (Bus) ಮತ್ತು ಕಾರಿನ (Car) ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆಯ ಬಳಿ ನಡೆದಿದೆ.
ಮೃತರನ್ನ ಪೂಜಾ ಹಿರೇಮಠ್ (41) ಹಾಗೂ ರಾಜಶೇಖರ್ (18) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಪೂಜಾ ಹಿರೇಮಠ್ ಪತಿ ಶಿವಯೋಗಯ್ಯ ಹಿರೇಮಠ್ (49) ಅವರ ಸ್ಥಿತಿ ಗಂಭೀರವಾಗಿದ್ದು ಅವರನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. ಧರ್ಮಸ್ಥಳಕ್ಕೆ (Dharmasthala) ಹೋಗಿ ಬೆಂಗಳೂರಿಗೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ.
ಮೃತರು ಬೆಂಗಳೂರಿನ ಕೋಣನಕುಂಟೆ ಮೂಲದವರು ಎಂದು ತಿಳಿದು ಬಂದಿದೆ. ಧರ್ಮಸ್ಥಳಕ್ಕೆ ಹೋಗಿದ್ದ ಈ ಕುಟುಂಬ ಅಲ್ಲಿಂದ ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧ ಕಾಲೇಜಿನಲ್ಲಿ ಓದುತ್ತಿದ್ದ ತಮ್ಮ ಹಿರಿಯ ಮಗನನ್ನ ನೋಡಿ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]