ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಕಾರು (Car) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ (Tarikere) ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ 9 ಜನರು ಭದ್ರಾವತಿ (Bhadravathi) ಮೂಲದವರು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ. ಇದನ್ನೂ ಓದಿ: ರಕ್ತಚಂದನ ಸಾಗಿಸ್ತಿದ್ದ ಕಾರು ಭೀಕರ ಅಪಘಾತಕ್ಕೆ ಜಖಂ – ಪವಾಡವೆಂಬಂತೆ ಪಾರಾದ ಕಳ್ಳರು
ಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]