ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್, ಕಾರು ಹಾಗೂ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದಾಗ ದೇವನಹಳ್ಳಿ ಸಮೀಪದ ಚಿಕ್ಕಸಣ್ಣೆ ಬಳಿ ಕಲ್ಲು ಸಾಗಿಸುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಬಸ್, ಟ್ರ್ಯಾಕ್ಟರ್ನಿಂದ ತಪ್ಪಿಸಿಕೊಳ್ಳಲು ಹೋಗಿ ಕಾರಿಗೆ ಡಿಕ್ಕಿ ಹೊಡೆದು, ಟ್ರಾಕ್ಟರ್ ಮೇಲೆ ಹರಿದಿದೆ. ಅಲ್ಲದೇ ಬ್ಯಾರಿಕೇಡ್ ಭೇದಿಸಿಕೊಂಡು ರಸ್ತೆ ಬದಿಗೆ ಬಂದು ನಿಂತಿದೆ. ಘಟನೆಯಲ್ಲಿ ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಪಠ್ಯ ಪುಸ್ತಕಗಳ ಮರು ಪರಿಷ್ಕರಣೆ ಮಾಡುವಂತೆ ಸಿಎಂಗೆ ರಮೇಶ್ ಕುಮಾರ್ ಪತ್ರ
ಸದ್ಯ ಕಾರಿನಲ್ಲಿದ್ದವರು ತೆಲಂಗಾಣ ಮೂಲದ ಗುಪ್ತಚರ ಇಲಾಖೆಯ ಡಿಸಿಪಿ ಹಾಗೂ ಅವರ ಕುಟುಂಬದವರು ಎಂದು ತಿಳಿದುಬಂದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿಗೆ ಡ್ಯಾಮೇಜ್ ಆಗಿದ್ದು, ಜೊತೆಗೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರಿಗೂ ಚಿಕ್ಕಪುಟ್ಟ ಗಾಯಗಳಾಗಿದೆ. ಇದೀಗ ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ರಾಜ್ ಠಾಕ್ರೆ ಆಸ್ಪತ್ರೆಗೆ ದಾಖಲು- ನಾಳೆ ಶಸ್ತ್ರಚಿಕಿತ್ಸೆ