ಬೆಂಗಳೂರು: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕೆಎಸ್‍ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 12 ಜನ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಯಲ್ಲಿ ನಡೆದಿದೆ.
ಹೊಸಕೋಟೆ ಫ್ಲೈಓವರ್ ಮೇಲೆ ಗೂಡ್ಸ್ ಲಾರಿ ಕೆಟ್ಟು ನಿಂತಿದ್ದಾಗ ಆಂಧ್ರದ ಪಲಮನೇರುನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‍ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಸೇರಿ 12 ಪ್ರಯಾಣಿಕರಿಗೆ ಗಾಯಗಳಾಗಿದೆ.
ಅಪಘಾತದಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಹೊಸಕೋಟೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ಹೇಳಲಾಗಿದೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.