ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ.
ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಡ್ರಂಕ್ & ಡ್ರೈವ್: ಬೆಂಗಳೂರಲ್ಲಿ ಒಂದೇ ದಿನ 200 ಕೇಸ್ ದಾಖಲು
ಕಾರಿನಲ್ಲಿದ್ದವರನ್ನು ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ