ಬೆಳಗಾವಿ: ಬೈಕಿಗೆ KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ವಿನೋದ ಹೊಗೆನ್ನವರ (22) ಆಕಾಶ್ ಜಾಧವ (20) ರವಿ ಕುರುಬರ (22) ಮೃತ ದುರ್ದೈವಿಗಳು. KSRTC ಬಸ್ ಸವದತ್ತಿಯಿಂದ ಧಾರವಾಡದ ಕಡೆಗೆ ಹೋಗುತ್ತಿತ್ತು. ಈ ವೇಳೆ ಎದರಿನಿಂದ ಬೈಕ್‌ಗೆ ಬಸ್ ಗುದ್ದಿದೆ. ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಸವದತ್ತಿ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಅರಸಾಳು ಬಳಿ ರೈಲ್ವೆ ಹಳಿ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು

