– ಕಾರ್ಮಿಕರು ಯಾವುದೇ ದಾಖಲೆ ತೋರಿಸು ಅಗತ್ಯವಿಲ್ಲ
ಬೆಂಗಳೂರು: ತಮ್ಮ ಊರಿಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರಿಂದ ಹಣ ಪಡೆಯುತ್ತಿದ್ದ ಸರ್ಕಾರ ಈಗ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ಕೆಎಸ್‌ಆರ್‌ಟಿಸಿ ಶನಿವಾರ ಕಾರ್ಮಿಕರಿಂದ ದುಪ್ಪಟ್ಟು ಹಣವನ್ನು ಪಡೆಯುವ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡಿದ್ದ ರಾಜ್ಯ ಸರ್ಕಾರ ಹಳೇ ದರವನ್ನು ಪಡೆಯುವಂತೆ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಸರ್ಕಾರ ಇಂದು ಪ್ರಯಾಣಿಕರ ಬಳಿಯಿಂದ ಯಾವುದೇ ಹಣವನ್ನು ಪಡೆಯುವುದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ವಲಸೆ ಕಾರ್ಮಿಕರಿಗೆ ಬಿಗ್ ಶಾಕ್- ಬೆಂಗ್ಳೂರಿನಿಂದ ಹೊರಟವ್ರಿಗೆ ಡಬಲ್ ದರದ ಬಿಸಿ

ಬಸ್‍ಗಳಲ್ಲಿ ಸಂಚರಿಸುವ ಎಲ್ಲರೂ ಕಾರ್ಮಿಕರೆಂದು ನಾವು ಭಾವಿಸಿದ್ದೇವೆ. ಉಚಿತ ಪ್ರಯಾಣ ನೀಡಿರುವುದು ಸಿಹಿ ಸುದ್ದಿಯಾಗಿದೆ. ಕಾರ್ಮಿಕರು ಯಾವುದೇ ಆತಂಕವಿಲ್ಲದೆ ಸುಖಕರವಾಗಿ ಪ್ರಯಾಣಿಸಬಹುದು. ಈಗಾಗಲೇ ಹಣ ಪಾವತಿಸಿ ಪ್ರಯಾಣಿಸುತ್ತಿರುವ ಕಾರ್ಮಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ ಎಂದು ಕಳಸದ್ ತಿಳಿಸಿದರು.
ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?:
ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 (ಮಂಗಳವಾರ) ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ದಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.
ಮೆಜೆಸ್ಟಿಕ್‍ನಲ್ಲಿ ಸಾವಿರಾರೂ ಕಾರ್ಮಿಕರು ಜಮಾಯಿಸಿದ್ದಾರೆ. ಹೀಗಾಗಿ ಕೆಎಸ್‌ಆರ್‌ಟಿಸಿ 200ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಅಧಿಕಾರಿಗಳು ಮುಂದೆ ನಿಂತು ಕಾರ್ಯನಿರ್ವಹಿಸುತ್ತಿದ್ದಾರೆ. ಇಂದು ಬಸ್ ನಿಲ್ದಾಣದಲ್ಲಿ ಸೇರಿರುವ ಎಲ್ಲರನ್ನೂ ತಮ್ಮ ಜಿಲ್ಲೆಗಳಿಗೆ ಕಳಿಸಿಕೊಡಲು ಸಿದ್ಧತೆ ನಡೆದಿದೆ. ಅಷ್ಟೇ ಅಲ್ಲದೆ ದಾಖಲೆಗಳನ್ನು ತೋರಿಸಲೇ ಬೇಕು ಎಂದು ಸರ್ಕಾರ ಈ ಹಿಂದೆ ಸೂಚನೆ ನೀಡಿತ್ತು. ಆದರೆ ಈಗ ಯಾವುದೇ ದಾಖಲೆ ತೋರಿಸು ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಸೋಮವಾರದಿಂದ 12 ಜಿಲ್ಲೆಯೊಳಗೆ ಬಸ್ ಸಂಚಾರ ಆರಂಭ
ಈ ಮೊದಲು ಎಲ್ಲಿಗೆ, ಎಷ್ಟು ದರ ಇತ್ತು?
ಬಾಗಲಕೋಟೆಗೆ ಈ ಹಿಂದೆ ನಿಗದಿಯಾಗಿದ್ದ 700 ರೂ. ಬದಲು 1,311 ರೂ. ಪಡೆಯಲಾಗುತ್ತಿದೆ. ಅಂತೆಯೇ ಬಳ್ಳಾರಿಗೆ ತೆರಳಲು 450 ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ವಸೂಲಿ ಮಾಡಲಾಗುತ್ತಿದೆ. ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ಚಿತ್ರದುರ್ಗಕ್ಕೆ ತೆರಳಲು 300 ರೂ. ಬದಲು 602 ರೂ., ಕೊಪ್ಪಳಕ್ಕೆ ತೆರಳಲು 600 ರೂಪಾಯಿ ಬದಲು 1,000 ರೂ., ಕಲಬುರಗಿಗೆ ತೆರಳಲು 900 ರೂಪಾಯಿ ಬದಲು 1,619 ರೂ. ಪಡೆಯಲಾಗುತ್ತಿದೆ. ಹೀಗೆ ವಿವಿಧ ಪ್ರದೇಶಗಳಿಗೆ ಹೋಗಲು ಸಿದ್ಧರಾದ ವಲಸೆ ಕಾರ್ಮಿಕರಿಗೆ ಬಸ್ ಟಿಕೆಟ್ ದರ ಆಘಾತ ನೀಡಿದೆ.





