ರಾಮನಗರ: ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಗುದ್ದಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಳ್ಳಕ್ಕೆ ಮಗುಚಿದ ಪರಿಣಾಮ ಬೈಕ್‌ನಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ (Sub Inspector) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಸಮೀಪ ನಡೆದಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಸಬ್ ಇನ್ಸ್‌ಪೆಕ್ಟರ್ ನಾಗರಾಜು ಮೃತ ದುರ್ದೈವಿ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಎದುರಿಗೆ ಬರುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಬಳಿಕ ಹಳ್ಳಕ್ಕೆ ಮಗುಚಿ ಬಿದ್ದಿದೆ. ಇದನ್ನೂ ಓದಿ: ಐಪಿಎಲ್ ಪ್ಲೇಆಫ್ – 4ನೇ ಸ್ಥಾನಕ್ಕೆ 3 ತಂಡಗಳ ಮಧ್ಯೆ ರೇಸ್
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಳೆಯ ಅವಾಂತರ – ಸಾಯಿ ಲೇಔಟ್‌ಗೆ ಜಲದಿಗ್ಭಂದನ