ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಡಿವೈಡರ್‌ಗೆ ಡಿಕ್ಕಿ ಹೊಡೆದು, ಡಿವೈಡರ್ ಮೇಲೆ ಹತ್ತಿದ ಘಟನೆ ನೆಲಮಂಗಲ (Nelamangala) ಬಳಿ ನಡೆದಿದೆ.
ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ – ಬರೋಬ್ಬರಿ 5.38 ಕೋಟಿ ಸಂಗ್ರಹಿಸಿದ BMRCL
Advertisement
Advertisement
ಏನಿದು ಘಟನೆ?
ಅಪಘಾತಕ್ಕೀಡಾದ ಬಸ್ ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ (National Highway) ಫ್ಲೈಓವರ್ ರಸ್ತೆಯಲ್ಲಿ ಬರುತ್ತಿದ್ದಾಗ ಚಾಲಕ ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 6 ಮಂದಿಗೆ ಗಂಭೀರ ಗಾಯಗಳಾಗಿವೆ. ಉಳಿದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Advertisement
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್ ನಲ್ಲಿ 35 ಜನರು ಪ್ರಯಾಣಿಸುತ್ತಿದ್ದರು, ಸಲ್ಪ ಯಾಮಾರಿದ್ದರೂ ಬಸ್ ಫ್ಲೈವರ್‌ನಿಂದ ಕೆಳಗೆ ಬೀಳುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್ ತಿರುಗೇಟು
Advertisement
ಘಟನೆ ಸಂಬಂಧ ನೆಲಮಂಗಲ ಸಂಚಾರ ಪೋಲಿಸ್ ಠಾಣೆಯಲ್ಲಿ (Nelamangala Traffic Police) ಪ್ರಕರಣ ದಾಖಲಾಗಿದೆ.