-ಖಾಸಗಿ ವಾಹನಗಳಲ್ಲಿಯೂ ತೆರಳಲು ಅವಕಾಶ
-ಆದೇಶದಲ್ಲಿ ಒಂದಷ್ಟೂ ಗೊಂದಲ
ಬೆಂಗಳೂರು: ವಲಸೆ ಕಾರ್ಮಿಕರಿಗೆ ತಮ್ಮೂರಿಗೆ ತೆರಳಲು ಇವತ್ತು ಒಂದೇ ದಿನ ಅವಕಾಶ ಕಲ್ಪಿಸಲಾಗಿದೆ. ಇಂದು ಹೋಗುವವರು ಮಾತ್ರ ಹೋಗಬಹುದು. ಮಿಸ್ ಆದ್ರೆ ಲಾಕ್‍ಡೌನ್ ಸಂಪೂರ್ಣ ಸಡಿಲಿಕೆ ಆಗೋವರೆಗೆ ಕಾಯಬೇಕು.
ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ವರಿಷ್ಠಾಧಿಕಾರಿಗಳಿಂದ ಅನುಮತಿ ಪಡೆದು ಖಾಸಗಿ ವಾಹನಗಳಲ್ಲಿಯೂ ಸಂಚರಿಸಬಹುದಾಗಿದೆ. ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Advertisement
Advertisement
Advertisement
ಇಂದು ಬೆಳಗ್ಗೆ 10 ಗಂಟೆಯಿಂದ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಗಳು ಪ್ರಯಾಣ ಆರಂಭಿಸಲಿವೆ. ಯಾರೇ ಊರಿಗೆ ಹೋಗಬೇಕಾದವರು ಮೆಜೆಸ್ಟಿಕ್ ನಿಲ್ದಾಣಕ್ಕೆ ಬರಬೇಕು. ಬೆಂಗಳೂರಿನ ವಿವಿಧ ಭಾಗಗಳಲ್ಲಿರುವ ಕಾರ್ಮಿಕರು ಮೆಜೆಸ್ಟಿಕ್ ಗೆ ಹೇಗೆ ಬರಬೇಕು ಎಂಬುದರ ಬಗ್ಗೆ ಗೊಂದಲವಿದೆ.
Advertisement
ಈ ಕುರಿತು ಕೆಎಸ್‍ಆರ್ ಟಿಸಿ ಪ್ರಧಾನ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಮಾತನಾಡಿ, ವಲಸೆ ಕಾರ್ಮಿಕರಿಗೆಂದು ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ವಲಸೆ ಕಾರ್ಮಿಕರನ್ನು ಹೊರತುಪಡಿಸಿ ವಿದ್ಯಾರ್ಥಿಗಳು, ಬೇರೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ಸಾಮಾಜಿಕ ಅಂತರ ಇಲ್ಲದಂತಾಗಿದೆ. ಕೇವಲ 40 ಬಸ್ ಎಂದು ಮೊದಲು ಅಂದಾಜಿಸಿದ್ದೆವು. ಆದರೆ ಇದೀಗ 120 ಬಸ್‍ಗಳು ಹೊರಟಿವೆ ಎಂದು ಮಾಹಿತಿ ನೀಡಿದ್ದರು.
ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೂ ಬಸ್ಸುಗಳ ವ್ಯವಸ್ಥೆ ಇದೆ. ಕೇವಲ ವಲಸೆ ಕಾರ್ಮಿಕರಷ್ಟೇ ಬರಬೇಕು, ಎಲ್ಲರೂ ಬಂದರೆ ಬಸ್ಸುಗಳ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. 100 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಇಂದಿನಂತೆ ಕಾಂಟ್ರಾಕ್ಟ್ ಬೇಸ್ ಬಸ್ಸುಗಳನ್ನು ಇನ್ನು ಓಡಿಸುವುದಿಲ್ಲ. ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾವಾರು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬದಲಿಸಲಾಗಿದೆ. 6 ಗಂಟೆಗೆ ಮುಗಿಯಬೇಕಿದ್ದ ಬಸ್ಸುಗಳ ಸಂಚಾರ ಹೆಚ್ಚು ಪ್ರಯಾಣಿಕರು ಇರುವುದರಿಂದ 10 ಗಂಟೆಯಾದರೂ ನಿಂತಿಲ್ಲ. ಇಂದು ಕಡೆ ದಿನ ವಲಸೆ ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಎಂದು ತಿಳಿಸಿದರು.