ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ.
ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 38 ಜನರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ – ಮುಂದಿನ ಪೀಳಿಗೆಗೆ ದೇಶಭಕ್ತಿಯ ಸಂದೇಶ ರವಾನಿಸುವ ಕೆಲಸ: ಡಿಕೆಶಿ
ಕೆಎಸ್‌ಆರ್‌ಟಿಸಿ ಬಸ್ ಅಂಜಳ ಗ್ರಾಮದಿಂದ ದೇವದುರ್ಗಕ್ಕೆ ವಾಪಸ್ಸಾಗುತ್ತಿತ್ತು. ಈ ವೇಳೆ ಅಂಚೇಸುಗೂರು ಕಾಲುವೆಯ ಸೇತುವೆ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದ್ದು, ಪರಿಣಾಮ ಬಸ್‌ನಲ್ಲಿದ್ದ 40 ಜನರ ಪೈಕಿ 38 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಂಡಕ್ಟರ್ ಚಿಕಿತ್ಸೆ ಫಲಕಾರಿಯಾಗದೇ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಡಲೇ ಧಾವಿಸಿ, ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಸಲಾಕೆಗಳಿಂದ ಬಸ್‌ನ ಗಾಜು ಒಡೆದು, ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್‌ಗಳಲ್ಲಿ ಗಾಯಾಳುಗಳನ್ನ ರವಾನೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ (Devadurga) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಒಬ್ಬರ ಏಳಿಗೆಯನ್ನ ಇನ್ನೊಬ್ಬರು ಸಹಿಸಲ್ಲ : ದುನಿಯಾ ವಿಜಯ್

