ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ (KSRTC) ಬಸ್ ಪಲ್ಟಿಯಾದ ಪರಿಣಾಮ 17ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ (Yellapur) ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ.
ಶಿರಸಿಯಿಂದ ಬೆಳಗಾವಿಗೆ ಹೋಗುತಿದ್ದ ಕೆಎಸ್‌ಆರ್‌ಟಿಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಮಹಿಳಾ ಅಧಿಕಾರಿ ಮೇಲೆ ಅವಾಚ್ಯ ಪದ ಬಳಕೆ – ಭದ್ರಾವತಿ ಕಾಂಗ್ರೆಸ್ ಶಾಸಕ ಪುತ್ರನ ವಿರುದ್ಧ ಆರೋಪ
ಗಂಭೀರ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಇದನ್ನೂ ಓದಿ: Kolar | ಮಾಲೂರು ಪೊಲೀಸರ ಕಾರ್ಯಾಚರಣೆ – ಜೂಜಾಟವಾಡುತ್ತಿದ್ದ 6 ಮಂದಿ ಅರೆಸ್ಟ್