ಕೊಪ್ಪಳ: ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಬಳಿ ನಡೆದಿದೆ.
ಇಂದು ಬೆಳ್ಳಂಬೆಳಗ್ಗೆ ಬಸ್ ರಸ್ತೆ ಪಕ್ಕಕ್ಕೆ ಉರುಳಿದ ಪರಿಣಾಮ ಐವರಿಗೆ ಗಾಯವಾಗಿದ್ದು, ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಸದ್ಯ ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರು ಗ್ರಾಮಂತರ ಘಟಕ 1 ಡಿಪೋಗೆ ಈ ಬಸ್ ಸೇರಿದ್ದು, 14ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಇಂದು ಬೆಳ್ಳಂಬೆಳಗ್ಗೆ ಬಸ್ ಮೈಸೂರಿನಿಂದ ಕಲಬುರಗಿಗೆ ಪೊಲೀಸರನ್ನು ಡ್ರಾಪ್ ಮಾಡಿ ಡಿಪೋಗೆ ಮರಳುವಾಗ ಈ ಘಟನೆ ಸಂಭವಿಸಿದೆ.
ಡಿಪೋ ಅಧಿಕಾರಿಗಳು ರಾತ್ರೋರಾತ್ರಿ ವಾಪಸ್ಸಾಗುವಂತೆ ಚಾಲಕ ಹಾಗೂ ನಿರ್ವಾಹಕರಿಗೆ ಸೂಚಿಸಿದ್ದರು. ಅಲ್ಲದೆ ಖಾಲಿ ಬರುವ ಬದಲು ಪ್ರಯಾಣಿಕರನ್ನು ತುಂಬಿಕೊಂಡು ಬರಲು ಹೇಳಿದ್ದರು. ವಿಶ್ರಾಂತಿ ಇಲ್ಲದೇ ಕರ್ತವ್ಯ ಮಾಡುತ್ತಿದ್ದೇವೆ ಎಂದು ಚಾಲಕ-ನಿರ್ವಾಹಕರಿಗೆ ಹೇಳಿದ್ದಾರೆ.