ತುಮಕೂರು: ಇಷ್ಟು ದಿನ ಸಾರ್ವಜನಿಕರು ತಮ್ಮ ವಾಹನ ಕಳ್ಳತನವಾಗಿದೆ ಎಂದು ಪೊಲೀಸರಿಗೆ ದೂರು ನೀಡುತ್ತಿದ್ದರು. ಆದರೆ ಈಗ ಸಾರ್ವಜನಿಕರ ಆಸ್ತಿ ಕೆಎಸ್‌ಆರ್‌ಟಿಸಿ ಬಸ್ಸನ್ನೇ ಖದೀಮರು ಕದ್ದಿರುವ ಘಟನೆ ಗುಬ್ಬಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗುಬ್ಬಿ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅನ್ನು ಕದ್ದ ಕಳ್ಳರು, ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜನ್ನೇನಹಳ್ಳಿ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ. ಈ ವೇಳೆ ಕಳ್ಳರು ಬಸ್ಸಿನಿಂದ ಡೀಸೆಲ್ ಕದ್ದ ಬಳಿಕ ಇಲ್ಲಿ ಬಿಟ್ಟು ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕೃಷಿ ಕ್ಷೇತ್ರಕ್ಕೂ ಕಾಲಿಟ್ಟ ಡ್ರೋನ್ – ಕ್ರಿಮಿನಾಶಕ್ಕೆ ಡ್ರೋನ್ ಬಳಕೆ
Advertisement
Advertisement
ಎಡೆಯೂರು, ಕುಣಿಗಲ್, ಅಮೃತೂರು ಸುತ್ತಾಡಿ ಜನ್ನೆನಹಳ್ಳಿ ಬಳಿ ಬಸ್‍ನ್ನು ಬಿಟ್ಟಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಗುಬ್ಬಿ ಬಸ್ ನಿಲ್ದಾಣದಲ್ಲಿ ಈ ರೀತಿಯ ಘಟನೆ ಪದೇ ಪದೇ ನಡೆಯುತ್ತಿದ್ದು, ಈ ಕುರಿತು ಅಧಿಕಾರಿಗಳು ಯಾವ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಪ್ರಕರಣ ನಡೆಯುತ್ತಿದ್ದರೂ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ಸಿಸಿಟಿವಿಯನ್ನು ಸಹ ಅಳವಡಿಸಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಲಿನಿಂದ ತಲೆವರೆಗೂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
Advertisement
ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.