– ಜಾಹೀರಾತುದಾರರಿಗೂ ರಿಲೀಫ್
ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಜನರ ಬಳಿ ಹಣ ಇಲ್ಲದಂತಾಗಿದ್ದು, ಜೀವನ ಸಾಗಿಸುವುದೇ ದುಸ್ತರವಾಗಿದೆ. ಹೀಗಾಗಿ ಕೆಎಸ್‍ಆರ್ ಟಿಸಿ ತನ್ನ ಬಾಡಿಗೆದಾರರು ಹಾಗೂ ಜಾಹೀರಾತುದಾರರಿಗೆ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಿದೆ.
ಲಾಕ್‍ಡೌನ್ ಆದಾಗಿನಿಂದ ಎಲ್ಲ ಮಳಿಗೆಗಳು ಬಂದ್ ಆಗಿದ್ದು, ವ್ಯಾಪಾರವಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ಕೆಎಸ್‍ಆರ್ ಟಿಸಿಯಿಂದ ವಾಣಿಜ್ಯ ಮಳಿಗೆಗಳು, ಹೋಟೆಲ್‍ಗಳು ಹಾಗೂ ಜಾಹಿರಾತುದಾರರಿಗೆ ವಿನಾಯಿತಿ ನೀಡಲಾಗಿದೆ. ಲಾಕ್‍ಡೌನ್ ಆರಂಭವಾದ ದಿನದಿಂದ ಮುಗಿಯುವವರೆಗೂ ಬಾಡಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಕೆಎಸ್‍ಆರ್ ಟಿಸಿ ತಿಳಿಸಿದೆ.
Advertisement
Advertisement
ಈ ಮೂಲಕ ರಾಜ್ಯಾದ್ಯಂತ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣಗಳಲ್ಲಿ ಇರುವ ವಾಣಿಜ್ಯ ಮಳಿಗೆಗಳು, ಹೋಟೆಲ್ ಜಾಹೀರಾತುದಾರರಿಗೆ ವಿನಾಯಿತಿ ಸಿಕ್ಕಂತಾಗಿದೆ. ಯಾರಿಂದಲೂ ಬಾಡಿಗೆ, ಹಣ ಪಡೆಯದಂತೆ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕೆಎಸ್‍ಆರ್ ಟಿಸಿ ಸುತ್ತೋಲೆ ಹೊರಡಿಸಿದೆ.