ಬೆಂಗಳೂರು: ಟಿಕೆಟ್ ರಹಿತ ಪ್ರಯಾಣ ದಂಡಕ್ಕೆ ಆಹ್ವಾನ ಎಂದು ಸಾಮಾನ್ಯವಾಗಿ ಎಲ್ಲಾ ಕೆಎಸ್ಆರ್‌ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ) ಬಸ್ಸುಗಳಲ್ಲಿ ಬರೆದಿರುತ್ತಾರೆ. ಆದರೂ ಕೆಲ ಪ್ರಯಾಣಿಕರು ಟಿಕೆಟ್ ರಹಿತ ಪ್ರಯಾಣ ಮಾಡಿ ಸಂಸ್ಥೆಗೆ ಮೋಸ ಮಾಡುತ್ತಾರೆ. ಹೀಗೆ ಟಿಕೆಟ್ ರಹಿತ ಪ್ರಯಾಣ ಮಾಡಿದವರಿಂದ ಕೆಎಸ್ಆರ್‌ಟಿಸಿ ಅಧಿಕಾರಿಗಳು ಕೇವಲ ಒಂದೇ ವಾರದಲ್ಲಿ ಬರೋಬ್ಬರಿ 1,14,408 ರೂ. ದಂಡ ವಸೂಲಿ ಮಾಡಿದೆ.
Advertisement
ಜನವರಿ 20ರಿಂದ 27ರವರೆಗೆ ಕೆಎಸ್ಆರ್‌ಟಿಸಿ ತನಿಖಾ ಅಧಿಕಾರಿಗಳು ಚುರುಕಿನ ತನಿಖೆ ನಡೆಸಿದ್ದಾರೆ. ಈ ವೇಳೆ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಂದ ಬರೋಬ್ಬರಿ 1,14,408 ರೂ. ದಂಡ ವಸೂಲಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ತನಿಖಾ ಅಧಿಕಾರಿಗಳು 5,242 ಬಸ್ಸುಗಳನ್ನ ತನಿಖೆ ನಡೆಸಿದ್ದಾರೆ. ಈ ವೇಳೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ 691 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.
Advertisement
ಜೊತೆಗೆ 846 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಪಡೆದು ಪ್ರಯಾಣಿಸುವಂತೆ ಕೆಎಸ್ಆರ್‌ಟಿಸಿ ತಿಳಿಸಿದೆ.