ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.
ಅಪಘಾತ ಹೊರತುಪಡಿಸಿ ಸೇವಾ ಅವಧಿಯಲ್ಲಿ ಹೃದಯಾಘಾತ, ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಸ್ಟ್ರೋಕ್‌ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
Advertisement
Advertisement
ಈಗಾಗಲೇ ಅಪಘಾತದಿಂದ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರರ ಅವಲಂಬಿತರಿಗೆ 1 ಕೋಟಿ ರೂ. ವಿಮಾ ಪರಿಹಾರ ಮೊತ್ತ ನೀಡಲಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಲಾಗಿದೆ.
Advertisement
ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಕಾಯಿಲೆಗಳಿಂದ ತಮ್ಮ ಸೇವಾವಧಿಯಲ್ಲೇ ಮರಣ ಹೊಂದುತ್ತಿರುವ ಸುಮಾರು 100 ಕ್ಕೂ ಹೆಚ್ಚು ಪ್ರಕರಣಗಳು ನಿಗಮದಲ್ಲಿ ಪ್ರತಿವರ್ಷ ದಾಖಲಾಗುತ್ತಿದೆ. ಹೀಗಾಗಿ ಪರಿಹಾರದ ಮೊತ್ತ ಹೆಚ್ಚಿಸಲಾಗಿದೆ.
Advertisement
ಪರಿಷ್ಕೃತ ಆದೇಶವು ನ.1 ರಿಂದ ಮುಂದುವರಿದ ಮರಣ ಪ್ರಕರಣಗಳಿಗೆ ಅನ್ವಯಿಸುತ್ತದೆ ಎಂದು ನಿಗಮ ತಿಳಿಸಿದೆ. ಸದರಿ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ 100 ರೂ.ನಿಂದ 200 ರೂ.ಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ. ವಂತಿಕೆಯನ್ನು 100 ರೂ.ಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ.
Web Stories