ಬೆಂಗಳೂರು: ಬೊಲೆರೋ (Bolero) ವಾಹನದ ಟಯರ್ ಸ್ಫೋಟಗೊಂಡ (Tyre Blast) ಪರಿಣಾಮ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ಭೀಕರ ಅಪಘಾತ (Accident) ಸಂಭವಿಸಿದೆ ಎಂದು ಕೆಎಸ್‌ಆರ್‌ಟಿಸಿ (KSRTC) ಸ್ಪಷ್ಟನೆ ನೀಡಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ರಾಮನಗರ (Ramanagara) ತಾಲೂಕಿನ ವಿಜಯಪುರದಲ್ಲಿ ಫ್ಲೈವುಡ್ ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ (Bus Conductor) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಬಸ್ ಬೊಲೆರೋ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಸುದ್ದಿಯಾಗಿತ್ತು. ಈಗ ಘಟನೆಯ ಕುರಿತು ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ.
Advertisement
Advertisement
ಕೆಎಸ್‌ಆರ್‌ಟಿಸಿಯ ಇವಿ ಪವರ್‌ಪ್ಲಸ್ ಬಸ್ ಮುಂಭಾಗದಲ್ಲಿ ಚಲಿಸುತ್ತಿದ್ದ ಬೊಲೆರೋ ಲಗೇಜ್ ವಾಹನವು ಗಾಡಿಯ ಒಳಗೆ ಮತ್ತು ಟಾಪ್ ಮೇಲೆ 20 ಎಂಎಂ ಫ್ಲೈವುಡ್ ಶೀಟ್‌ಗಳನ್ನು (Flywood Sheet) ಓವರ್‌ಲೋಡ್ (Overload) ಮಾಡಿಕೊಂಡು ಹೋಗುತ್ತಿದ್ದ ಸಂದರ್ಭ ಹಠಾತ್ತನೆ ಟಯರ್ ಬ್ಲಾಸ್ಟ್ ಆಗಿದೆ. ಇದರಿಂದಾಗಿ ಬೊಲೆರೋ ವಾಹನದ ವೇಗ ಕಡಿಮೆಯಾಗಿ ಹಿಂದೆಯಿಂದ ಬರುತ್ತಿದ್ದ ಇವಿ ಪವರ್‌ಪ್ಲಸ್ ಬಸ್ ಬೊಲೆರೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬೊಲೆರೋ ವಾಹನದಲ್ಲಿದ್ದ 17ಕ್ಕೂ ಹೆಚ್ಚು ಫ್ಲೈವುಡ್‌ಗಳು ಬಸ್ಸಿನ ಮುಂಭಾಗದ ಗಾಜನ್ನು ಹೊಕ್ಕಿ ಬಸ್ಸಿನೊಳಗೆ ನುಗ್ಗಿ ಚಾಲಕನ ಎದೆಗೆ ತಗುಲಿದೆ. ಈ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಬಲಭಾಗದ ಡಿವೈಡರ್ ದಾಟಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಘಟನೆಯಿಂದಾಗಿ ಬಸ್ ನಿರ್ವಾಹಕ ರಮೇಶ್ (51) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: 15 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ – ಕಂತೆ ಕಂತೆ ನೋಟುಗಳು ಪತ್ತೆ
Advertisement
ಅಪಘಾತದಿಂದ ಬಸ್ಸಿನಲ್ಲಿದ್ದ 22 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಮನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಚಾಲಕ ಮತ್ತು ಇನ್ನೂ ಮೂವರು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ (Bengaluru) ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಮುಖ್ಯ ಸಂಚಾರ ವ್ಯವಸ್ಥಾಪಕರು, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ, ವಿಭಾಗೀಯ ನಿಯಂತ್ರಣಾಧಿಕಾರಿ, ಬೆಂಗಳೂರು ಕೇಂದ್ರೀಯ ವಿಭಾಗ ಹಾಗೂ ಇತರೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಹೆಚ್ಚಿನ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಿರುತ್ತಾರೆ. ಇದನ್ನೂ ಓದಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ
Advertisement
ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ ನಿಗಮ, ನಮ್ಮ ನಿರ್ವಾಹಕರ ಅಗಲಿಕೆ ಅತೀವ ನೋವನ್ನುಂಟು ಮಾಡಿದೆ. ನಿಗಮದ ಅಧಿಕಾರಿಗಳು ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯಲ್ಲಿರುವ ಪ್ರಯಾಣಿಕರ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ನಿಗಮವು ಭರಿಸುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಆಪರೇಷನ್ ಥಿಯೇಟರ್‌ನಲ್ಲಿ ಹಿಜಬ್ ಧರಿಸುವುದು ಕಷ್ಟ, ಪರ್ಯಾಯ ಆಯ್ಕೆ ಕೊಡಿ – ಪ್ರಿನ್ಸಿಪಾಲ್‍ಗೆ ಪತ್ರ
Web Stories