ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) 6 ಪ್ರಶಸ್ತಿಗಳ ಗರಿಮೆ ಸಿಕ್ಕಿದೆ. ಕಳೆದ 8 ತಿಂಗಳಲ್ಲಿ ನಿಗಮಕ್ಕೆ 51 ಪ್ರಶಸ್ತಿಗಳು ಒಲಿದು ಬಂದಿವೆ.
ಕೆಎಸ್ಆರ್ಟಿಸಿಗೆ World Manufacturing Congress ಹಾಗೂ World Marketing Congressನ 5 ಪ್ರಶಸ್ತಿಗಳು ಹಾಗೂ ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದೆ. ಇದನ್ನೂ ಓದಿ: ಪರ್ಫ್ಯೂಮ್ ಗೋಡೌನ್ಗೆ ಬೆಂಕಿ – ಮೂವರು ಸಜೀವ ದಹನ
Advertisement
Advertisement
ಇ.ವಿ.ಪವರ್ ಪ್ಲಸ್ ವ್ಯವಸ್ಥೆಗಾಗಿ ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮಕ್ಕಾಗಿ ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ, ಅತ್ಯುತ್ತಮ ವಿನೂತನ ಉಪಕ್ರಮ ಸಂಸ್ಥೆಗಾಗಿ ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ, ಕಾರ್ಮಿಕರೊಂದಿಗೆ ಉತ್ತಮ ಭಾಂದವ್ಯಕ್ಕಾಗಿ ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ, ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ದಕ್ಕಿದೆ.
Advertisement
ಇದಲ್ಲದೆ, ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಮನೆ ಮೇಲೆ ವಿದ್ಯುತ್ ಕಂಬ ಉರುಳಿಸಿ ಪುಂಡಾಟ ಮೆರೆದ ಕಾಡಾನೆ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
Advertisement
ಶನಿವಾರ ಮುಂಬೈನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಅಧ್ಯಕ್ಷರು ಹಾಗೂ ಮುಖ್ಯಸ್ಥರಾದ ನಿನಾ ಇ ಉಡರ್ಡ, ದುಬೈನ ಓಝೋನ್ ಗ್ರೂಪ್ನ ಸಂಸ್ಥಾಪಕರಾದ ಡಾ. ಓವಿಲಿಯಾ ಫೆರ್ನಾಂಡಿಸ್ ಅವರು ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಮಂಡಳಿ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರರು ಹೆಚ್.ಎಸ್.ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯ.ಸಿ., ಸಹಾಯಕ ಆಡಳಿತಾಧಿಕಾರಿ ರವರು ನಿಗಮದ ಪರವಾಗಿ ಶಿಬಾ.ಎಸ್ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ: ವಿಶೇಷ ಬೇಡಿಕೆ ಇಟ್ಟು ಅಯೋಧ್ಯೆ ರಾಮನಿಗೆ ಹಿಂಗಾರ ಸಮರ್ಪಣೆಗೆ ಮುಂದಾದ ಮಲೆನಾಡಿಗರು