– ರಾತ್ರಿ ಡಿಪೋಗೆ ಬಂದಾಗ ನಿರ್ವಾಹಕನಿಗೆ ಶಾಕ್
– ರಜೆ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡ ನಿರ್ವಾಹಕ
ಕೊಪ್ಪಳ: ಮಗಳು ಮೃತಪಟ್ಟ ವಿಷಯವನ್ನು ಮುಚ್ಚಿಟ್ಟು ಕರ್ತವ್ಯಕ್ಕೆ ಕಳುಹಿಸಿದ ಅಮಾನವೀಯ ಘಟನೆಯೊಂದು ಕೊಪ್ಪಳದ ಕೆಎಸ್‍ಆರ್ ಟಿಸಿ ಡಿಪೋದಲ್ಲಿ ನಡೆದಿದೆ.
ಗಂಗಾವತಿ ಕೆಎಸ್‍ಆರ್ ಟಿಸಿ ಡಿಪೋದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಪ್ರಮಾದ ಎಸಗಿದ್ದರಿಂದ ಕಂಡಕ್ಟರ್ ಮಂಜುನಾಥ್ ಅವರು ತನ್ನ ಮಗಳು ಮೃತಪಟ್ಟಿದ್ದರೂ ಕೊನೆಗಳಿಗೆ ಮುಖವನ್ನು ನೋಡದಂತೆ ಆಗಿದೆ.
Advertisement
ಕೊಪ್ಪಳದ ಗಂಗಾವತಿ ಕೊಲ್ಲಾಪುರ ಬಸ್ಸಿನ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಬಾಗಲಕೋಟೆ ತಾಲೂಕಿನ ರಾಂಪೂರದ ಮಂಜುನಾಥ್ ಅವರ ಪುತ್ರಿ ಕವಿತಾ ಅನಾರೋಗ್ಯದ ಕಾರಣ ಬುಧವಾರ ಮುಂಜಾನೆ 10 ಗಂಟೆ ಸುಮಾರಿಗೆ ಮೃತಪಟ್ಟಿದ್ದಾಳೆ. ಕವಿತಾ ಸಾವನ್ನಪ್ಪಿದ ವಿಷಯವನ್ನು ತಂದೆ ಮಂಜುನಾಥ್‍ಗೆ ತಿಳಿಸಲು ಕುಟುಂಬ್ಥರು ಗಂಗಾವತಿ ಬಸ್ ಡಿಪೋಗೆ ಫೋನ್ ಮಾಡಿ ಹೇಳಿದ್ದಾರೆ. ಆದರೆ ಅಲ್ಲಿನ ಅಧಿಕಾರಿಗಳು ಮಂಜುನಾಥ್‍ಗೆ ಮಗಳು ಮೃತಪಟ್ಟಿರುವ ವಿಷಯ ತಿಳಿಸದೇ ಕೆಲಸಕ್ಕೆ ಕಳುಹಿಸಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಚಾಲಕರೇ ಹುಷಾರ್ – ಮೊಬೈಲ್ ಇಟ್ಕೊಂಡ್ರೆ ಕೆಲ್ಸ ಕಳ್ಕೋತಿರಾ!
Advertisement
Advertisement
ಮಂಜುನಾಥ್ ಕೆಲಸಕ್ಕೆ ಹೋಗಿ ಗುರುವಾರ ರಾತ್ರಿ ಡಿಪೋಗೆ ಬಂದಾಗ ವಿಷಯ ಗೊತ್ತಾಗಿದೆ. ಮಗಳ ಸಾವಿನ ವಿಷಯವನ್ನು ಒಂದು ದಿನ ತಡವಾಗಿ ತಿಳಿದ ಮಂಜುನಾಥ್ ದಿಗ್ಭ್ರಮೆಗೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಮಂಜುನಾಥ್ ಅವರು ಅಧಿಕಾರಿಗಳ ಬಳಿ ಹೋಗಿ ಮಗಳು ಸಾವನ್ನಪ್ಪಿರುವ ವಿಷಯ ತಿಳಿಸಿದ್ದಾರೆ. ನನಗೆ ಶುಕ್ರವಾರ ರಜೆ ಕೊಡಿ ಊರಿಗೆ ಹೋಗುತ್ತೇನೆ ಎಂದು ಅಂಗಲಾಚಿ ಬೇಡಿಕೊಂಡರೂ ಅಧಿಕಾರಿಗಳು ಮಾತ್ರ ರಜೆ ನೀಡಲು ನಿರಾಕರಿಸಿದ್ದಾರೆ.
Advertisement
ಕೊನೆಯ ಸಾರಿ ಮಗಳ ಮುಖವನ್ನು ನೋಡದ ಹಾಗೆ ಮಾಡಿದ ಅಧಿಕಾರಿಗಳು ಇದೀಗ ಮನೆಗೆ ಹೋಗಲು ಸಹ ರಜೆ ನೀಡುತಿಲ್ಲ ಎಂದು ಸಹೋದ್ಯೋಗಿಗಳ ಜೊತೆ ಮಂಜುನಾಥ್ ತಮ್ಮ ಅಳಲನ್ನು ತೊಡಿಕೊಳ್ಳುತ್ತಿದ್ದಾರೆ.
ಫೋನ್ ಬಳಕೆಯಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಚಾಲಕ ಮತ್ತು ನಿರ್ವಾಹಕರಿಗೆ ಮೊಬೈಲ್ ಫೋನ್ ಬಳಕೆಯನ್ನು ನಿರ್ಬಂಧಿಸಿದೆ. ಒಂದು ವೇಳೆ ಆದೇಶ ಮೀರಿ ನಡೆದುಕೊಂಡರೆ ಕೆಲಸದಿಂದಲೇ ಅಮಾನತು ಮಾಡಲಾಗುತ್ತದೆ.