ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ (Siddaramaiah Government) ವಿರುದ್ಧ ವೈಎಸ್‌ಟಿ ಟ್ಯಾಕ್ಸ್ (YST Tax) ಕುಮಾರಸ್ವಾಮಿ (HD Kumaraswamy) ವಿರುದ್ಧ ಕಾಂಗ್ರೆಸ್ ಕೆಎಸ್‌ಟಿ ಟ್ಯಾಕ್ಸ್ (KST Tax) ಆರೋಪ ಮಾಡಿದೆ.
ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಒಂದು ದಿನದ ಬಾಡಿಗೆ ಎಷ್ಟು? ಅಲ್ಲೊಂದು ಖಾಯಂ ಅಡ್ಡ ತೆರೆದಿದ್ದೀರಿ ಅಂದರೆ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದೆ.
Advertisement
Advertisement
ವೆಸ್ಟ್ ಎಂಡ್ ಹೋಟೆಲಿಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ “KST” ಸಂಗ್ರಹದ ಹಣ ಬಳಸುತ್ತಿದ್ದೀರಾ ಎಂದು ಪ್ರಶ್ನಿಸಿ #KSTkumara ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
Advertisement
ಎರಡು ದಿನದ ಹಿಂದೆ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ಜಾರಿಯಾಗಿದೆ. ದೇಶದಲ್ಲಿ ಜಿಎಸ್‍ಟಿ ಟ್ಯಾಕ್ಸ್ ಇರುವ ಹಾಗೆ ಈ ಸರ್ಕಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದರು.
Advertisement
Web Stories