ರಾಮನಗರ: ಮಾಗಡಿ ತಾಲೂಕಿನ ಕುದೂರು (Kudur) ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಶಾಲಾ ಕೊಠಡಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಅವಘಡದಲ್ಲಿ ಕೊಠಡಿಯಲ್ಲಿದ್ದ ಪೀಠೋಪಕರಣಗಳು ಹಾಗೂ ಇತರೆ ಕಲಿಕಾ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಶಾಲೆಯ ಹೊಸ ಕಟ್ಟಡ ನಿರ್ಮಾಣವಾದ ನಂತರ ಈ ಹಳೆಯ ಕೊಠಡಿಯನ್ನು ಖಾಲಿ ಬಿಡಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಚರಂಡಿ ದಾಟಲು ವೃದ್ಧನ ಬೆನ್ನೇರಿ ಕುಳಿತ ಕಂದಾಯ ಅಧಿಕಾರಿ
ತಡರಾತ್ರಿ ಇದ್ದಕ್ಕಿದ್ದಂತೆ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಉರಿಯಲಾರಂಭಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬೆಂಕಿ ಅವಘಡವು ಆಕಸ್ಮಿಕವಾಗಿ ಸಂಭವಿಸಿದೆಯೇ ಅಥವಾ ಯಾರಾದರೂ ಕಿಡಿಗೇಡಿಗಳು ಎಸಗಿದ ಕೃತ್ಯವೇ ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್‌ಕುಮಾರ್ ರಸ್ತೆ ಅಂಡರ್‌ಪಾಸ್‌ನಲ್ಲಿ ಸಿಲುಕಿದ ಗೂಡ್ಸ್ ಟ್ರಕ್

