ಗುಂಡಿನ ಚಕಮಕಿಯಲ್ಲಿ ಕುಕಿ ಸಮುದಾಯದ ಮಹಿಳೆ ಸಾವು – ಮಣಿಪುರ ಮತ್ತೆ ಉದ್ವಿಗ್ನ

Public TV
1 Min Read
Manipur

ಇಂಫಾಲ್‌: ಮಣಿಪುರದ ಚೂರಚಂದ್‌ಪುರದಲ್ಲಿ ಭದ್ರತಾ ಪಡೆ ಮತ್ತು ಶಸ್ತ್ರಸಜ್ಜಿತ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Manipur Crossfire) ಕುಕಿ ಸಮುದಾಯದ ಮಹಿಳೆ (Kuki Women) ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಕುಕಿ ಮತ್ತು ಮೈತೆಯಿ ಸಮುದಾಯಗಳ ನಡುವೆ ಮತ್ತೆ ಘರ್ಷಣೆ ಉಂಟಾಗಿದ್ದು, ಉದ್ವಿಗ್ನತೆಗೆ ಕಾರಣವಾಗಿದೆ.

Amur Falcon radio tagged in Manipur flies home to 22000 km return trip from Africa to Siberia India stopover 1

ಗುರುವಾರ ಮಧ್ಯಾಹ್ನ ಬಿಷ್ಣುಪುರದ ಕಣಿವೆ ಜಿಲ್ಲೆಯ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮೈತೆಯಿ ರೈತನೊಬ್ಬನ ಮೇಲೆ ಬೆಟ್ಟದಲ್ಲಿ ಅವಿತಿದ್ದ ದಾಳಿಕೋರರು ಗುಂಡು ಹಾರಿಸಿದ್ದರು. ಗುಂಡೇಟಿನಿಂದ ರೈತ (Meitei Farmer) ಗಾಯಗೊಂಡ ನಂತರ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಪಡೆಗಳ ಮೇಲೆ ಅಪರಿಚಿತ ಶಸ್ತ್ರಸಜ್ಜಿತ ಗುಂಪು ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಯೂ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಮಹಿಳೆಗೆ ಗುಂಡು ತಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Air India Crash | 215 ಡಿಎನ್‌ಎ ಮ್ಯಾಚ್‌ – 198 ಮೃತದೇಹ ಹಸ್ತಾಂತರ

Manipur Soldiers

ಮೃತ ಮಹಿಳೆಯನ್ನು ಲಾಂಗ್‌ಚಿಂಗ್‌ಮನ್ಸಿ ಎನ್ನುವ ಗ್ರಾಮದ ಮುಖ್ಯಸ್ಥನ ಪತ್ನಿ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: Plane Crash | ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ

ಆರೋಪಿಗಳನ್ನು ಸೆರೆ ಹಿಡಿಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು, ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಯಬೇಕು ಎಂದು ಪೊಲೀಸರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಇಂದು 5,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

Share This Article