Saturday, 15th December 2018

Recent News

ಸೊಂಡಿಲಿನಿಂದ ಬಡಿದು ಕಾರನ್ನು ಜಖಂಗೊಳಿಸಿದ ಕಾಡಾನೆ- ಓರ್ವ ಗಂಭೀರ

ಮಂಗಳೂರು: ಕಾಡಾನೆಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ಕಾರು ಜಖಂಗೊಂಡು, ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ.

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಯಾತ್ರಾರ್ಥಿಗಳು ಮಾರುತಿ ಓಮ್ನಿ ಕಾರಿನಲ್ಲಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದರು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಬಿಳಿನೆಲೆಯ ಸಿಪಿಸಿಆರ್ ಐ ಸಮೀಪ ಕಾಡಾನೆ ರಸ್ತೆ ಹಾದು ಹೋಗುತ್ತಿತ್ತು. ಇದನ್ನು ಕಂಡ ಚಾಲಕ ಕಾರನ್ನು ನಿಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಡಾನೆ ಹಿಂತಿರುಗಿ ಬಂದಿದ್ದು, ಸೊಂಡಿಲಿನಿಂದ ಕಾರಿನ ಮುಂಭಾಗಕ್ಕೆ ಬಡಿದು ಹಾನಿಯುಂಟು ಮಾಡಿದೆ. ಇದೇ ವೇಳೆ ಬಸ್ಸೊಂದು ಹಾರ್ನ್ ಮಾಡುತ್ತಾ ಬಂದ ಕಾರಣ ಕಾಡಾನೆ ಕಾರನ್ನು ಬಿಟ್ಟು ಓಡಿ ಹೋಗಿದೆ. ಇದರಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಈ ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಇನ್ನುಳಿದವರು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *