ಹೇಗ್: ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತಕ್ಕೆ ಐತಿಹಾಸಿಕ ರಾಜತಾಂತ್ರಿಕ ಜಯ ಸಿಕ್ಕಿದೆ. ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅಂತರಾಷ್ಟ್ರೀಯ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಜಾದವ್ ಅವರಿಗೆ ರಾಜತಾಂತ್ರಿಕ ನೆರವು ನೀಡಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಒಟ್ಟು 16 ಮಂದಿ ಇರುವ ನ್ಯಾಯಾಧೀಶರ ಪೈಕಿ 15 ಮಂದಿ ಭಾರತದ ಪರ ಮತವನ್ನು ಚಲಾಯಿಸಿದರೆ ಪಾಕಿಸ್ತಾನ ಜಡ್ಜ್ ಹುಸೇನ್ ಗಿಲಾನಿ ಪಾಕ್ ಪರ ಮತವನ್ನು ಹಾಕಿದ್ದಾರೆ.
Advertisement
Advertisement
ಭಾರತೀಯ ವಾಯಸೇನೆಯ ನಿವೃತ್ತ ನೌಕರರಾಗಿರುವ ಜಾಧವ್ ಅವರಿಗೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ ಈ ತೀರ್ಪಿಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಪ್ರಕರಣದ ವಿಚಾರಣೆ ನಡೆಸಿತ್ತು. ಭಾರತದ ವಕೀಲರು ಜಾಧವ್ ಬಿಡುಗಡೆಗೆ ವಾದ ಮಂಡಿಸಿದ್ದರು. ಎರಡು ದೇಶಗಳ ವಕೀಲರು ಪ್ರಕರಣದಲ್ಲಿ ತಮ್ಮ ವಾದ ಮಂಡಿಸಿದ್ದಾರೆ.
Advertisement
I wholeheartedly welcome the verdict of International Court of Justice in the case of Kulbhushan Jadhav. It is a great victory for India. /1
— Sushma Swaraj (@SushmaSwaraj) July 17, 2019
Advertisement
ಏನಿದು ಪ್ರಕರಣ?
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.
I hope the verdict will provide the much needed solace to the family members of Kulbhushan Jadhav. /4
— Sushma Swaraj (@SushmaSwaraj) July 17, 2019
ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.
International Court of Justice verdict: A continued stay of execution constitutes an indispensable condition for the effective review and reconsideration of the conviction and sentence of Mr. Kulbhushan Sudhir Jadhav pic.twitter.com/OwlznZP6of
— ANI (@ANI) July 17, 2019
ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಆದರೆ ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್ ನಲ್ಲಿ ಭಾರತ ಮಂಡಿಸಿತ್ತು.