ಇಸ್ಲಾಮಾಬಾದ್: ಮರಣದಂಡನೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರನ್ನು ಮಾನವೀಯ ನೆಲೆಯಲ್ಲಿ ಭೇಟಿ ಮಾಡಲು ಅವರ ಪತ್ನಿಗೆ ಪಾಕಿಸ್ತಾನ ಅನುಮತಿ ನೀಡಲು ಮುಂದಾಗಿದೆ.
ಮಾನವೀಯ ನೆಲೆಯಲ್ಲಿ ಕುಲಭೂಷಣ್ ಜಾಧವ್ ಮತ್ತು ಅವರ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಲು ಪಾಕ್ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಸ್ಲಾಮಾಬಾದ್‍ನಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆಯಲಾಗಿದೆ ಪಾಕ್ ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.
Advertisement
ಪಾಕಿಸ್ತಾನ ದಿಢೀರ್ ತನ್ನ ನಿಲುವು ಬದಲಾಯಿಸಿ ಜಾಧವ್ ಪತ್ನಿಯ ಭೇಟಿಗೆ ಅವಕಾಶ ನೀಡುವ ನಿರ್ಧಾರಕ್ಕೆ ಬರಲು ಕಾರಣ ಏನು ಎಂಬುದು ಬಹಿರಂಗವಾಗಿಲ್ಲ ಎಂದು ದಿ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
Advertisement
ಭಾರತ ಸರ್ಕಾರ ಈ ಹಿಂದೆ ಕುಲಭೂಷಣ್ ಜಾಧವ್ ಭೇಟಿಗೆ ಅವಕಾಶ ನೀಡಬೇಕೆಂದು ಪಾಕ್ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಪಾಕಿಸ್ತಾನ ಭಾರತದ ಮನವಿಯನ್ನು ತಿರಸ್ಕರಿಸಿತ್ತು. ಮನವಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಭಾರತ ನೆದರ್ ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದೂರು ನೀಡಿತ್ತು. ಭಾರತದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿತ್ತು.
Advertisement
ಏನಿದು ಪ್ರಕರಣ?
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.
Advertisement
ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ್ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.
ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.
ಇದನ್ನೂ ಓದಿ: ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಪರ ವಾದಿಸಲು ವಕೀಲ ಹರೀಶ್ ಸಾಳ್ವೆ ಸಂಭಾವನೆ ಕೇಳಿದ್ರೆ ನಿಜಕ್ಕೂ ಆಶ್ಚರ್ಯಪಡ್ತೀರಿ