ಮುಂಬೈ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ ಕಂಗನಾ ರಣಾವತ್‌ಗೆ (Kangana Ranaut) ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರ ವರ್ಗಾವಣೆ ಕುರಿತು ಊಹಾಪೋಹಗಳು ಹರಿದಾಡುತ್ತಿದೆ. ಈ ಬೆನ್ನಲ್ಲೇ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸ್ಪಷ್ಟನೆ ನೀಡಿದೆ.
ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೇ ಅವರನ್ನು ಚಂಡೀಗಢದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಇದೀಗ ಸಿಐಎಸ್ಎಫ್ ಸ್ಪಷ್ಟನೆ ಕೊಡುವ ಮೂಲಕ ಊಹಾಪೋಹಗಳಿಗೆ ಫುಲ್‌ಸ್ಟಾಪ್ ಹಾಕಿದೆ.
- Advertisement
ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ (Kulwinder Kaur) ಅವರನ್ನು ಇನ್ನೂ ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಸಿಐಎಸ್‌ಎಫ್ ತಿಳಿಸಿದೆ. ಇದನ್ನೂ ಓದಿ: ಹತ್ರಾಸ್ ದುರಂತ- ಪರಿಹಾರದ ಮೊತ್ತ ಹೆಚ್ಚಿಸಿದ ಸಿಎಂ ಯೋಗಿ ಆದಿತ್ಯನಾಥ್
- Advertisement
ಜೂನ್ 7 ರಂದು ಕಂಗನಾ ಚಂಡೀಗಢ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಹೊರಟಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಂಗನಾ ಹೇಳಿಕೆಯಿಂದ ಕುಲ್ವಿಂದರ್ ಅವರಿಗೆ ನೋವಾಗಿದೆ. ಈ ಕಾರಣದಿಂದ ಅವರಿ ಕಂಗನಾ ಕೆನ್ನೆಗೆ ಹೊಡೆದಿದ್ದಾರೆ ಎಂದು ಹೇಳಲಾಗಿತ್ತು.