– ಬಿಡದಿಯಲ್ಲಿ 20 ಟನ್ ಕೊಬ್ಬರಿ ಬೆಳೆದಿದ್ದೇನೆ – ರೈತನಲ್ಲ ಎಂದ ಡಿಸಿಎಂಗೆ ತಿರುಗೇಟು
ರಾಮನಗರ: ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumarswamy) ಮತ್ತೆ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರಿಗೆ ಸವಾಲು ಹಾಕಿದ್ದಾರೆ.
Advertisement
ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳುತ್ತಾರೆ. ಆ ನಿವೇಶನಕ್ಕೆ ಸಂಪೂರ್ಣವಾಗಿ ಹಣ ಕೊಟ್ಟಿಲ್ಲ. ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಅವರು ಒಂದು ನಿವೇಶನ ಖರೀದಿ ಮಾಡುವುದಾಗಿ ಮುಂಗಡ ಹಣ ಕೊಡುತ್ತಾರೆ. ಆದರೆ, ಅವರು ಪೂರ್ಣ ಮೊತ್ತ ಕೊಡುವುದಿಲ್ಲ. ಆಮೇಲೆ ಈ ವ್ಯಕ್ತಿ ಮಧ್ಯಪ್ರವೇಶ ಮಾಡುತ್ತಾರೆ ಎಂದು ಪರೋಕ್ಷವಾಗಿ ಆರೋಪಗಳ ಸುರಿಮಳೆಗೈದಿದ್ದಾರೆ.
Advertisement
ಬಳಿಕ ಈ ವ್ಯಕ್ತಿ ಮಂತ್ರಿಯಾದ ಮೇಲೆ ರಾತ್ರೋರಾತ್ರಿ ಅವರನ್ನು ಕರೆಸಿ ಹೆದರಿಸಿ, ಬೆದರಿಸಿ ಸೇಲ್ ಅಗ್ರಿಮೆಂಟಿಗೆ ರುಜು ಹಾಕಿಸಿಕೊಂಡಿದ್ದಾರೆ. ಇಂತಹ ವ್ಯಕ್ತಿ ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾವು ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
Advertisement
Advertisement
ಈಗ ಚನ್ನಪಟ್ಟಣಕ್ಕೆ ಬಂದು ಏನೋ ಉದ್ದಾರ ಮಾಡುತ್ತೇವೆ ಎಂದು ಅಣ್ಣ ತಮ್ಮ ಬಂದಿದ್ದಾರೆ. ನೂರಾರು ವರ್ಷ ಬಾಳಿ ಬದುಕಿರುವ ಮನೆಗಳಿಗೆ ಈಗ ಬಂದು ಹಕ್ಕುಪತ್ರ ಕೊಡ್ತಾರಂತೆ. ಹಾಗಾದರೆ, ರಾಜ್ಯದಲ್ಲಿ ನಿಮ್ಮ ಸರ್ಕಾರ ಬಂದು ಒಂದೂವರೆ ವರ್ಷ ಆಯ್ತು, ಇಷ್ಟು ದಿನ ಏನು ಮಾಡ್ತಿದ್ರಿ? ಚನ್ನಪಟ್ಟಣವನ್ನು ಉದ್ಧಾರ ಮಾಡಿರೋದು ಇಲ್ಲಿನ ಜನರಿಗೆ ಬಹಳ ಚೆನ್ನಾಗಿ ಗೊತ್ತಿದೆ. ಇಲ್ಲಿನ ಮತ್ತಿಕೆರೆ ಬಳಿ ಕಲ್ಲು ಗೋದಾಮು ಇದೆ. ಅಲ್ಲಿ ಹೋಗಿ ನೋಡಿ, ಎಷ್ಟು ಕಲ್ಲುಗಳನ್ನು ತಂದು ಇಲ್ಲಿ ಗುಡ್ಡೆ ಹಾಕ್ತಿದ್ದೀರಿ? ಎಲ್ಲೆಲ್ಲಿಗೆ ಕಳಿಸುತ್ತಿದ್ದೀರಿ? ನನಗೆ ಗೊತ್ತಿಲ್ಲದ ವಿಷಯವೇ? ಎಂದು ಸಭೆಯಲ್ಲಿ ಕಲ್ಲು ಗೋದಾಮುಗಳ ಫೋಟೋಗಳನ್ನು ತೋರಿಸಿ, ಇದಕ್ಕೆ ಉತ್ತರ ಕೊಡಪ್ಪಾ ಎಂದು ಕುಟುಕಿದ್ದಾರೆ.
ಕನಕಪುರದಲ್ಲಿ ಎಷ್ಟು ದಲಿತ ಕುಟುಂಬಗಳ ಹಾಳು ಮಾಡಿದ್ದೀರಿ ನೀವು? ಆ ಜನ ಕಣ್ಣಲ್ಲಿ ನೀರು ಹಾಕಿದ್ದನ್ನು ನಾನು ನೋಡಿದ್ದೇನೆ. ಕುಮಾರಸ್ವಾಮಿ ರೈತನ ಮಗ ಅಲ್ಲ ಎಂದಿದ್ದಾರೆ. ಪ್ಯಾಂಟ್ ತೆಗೆದು ಪಂಚೆ ಹಾಕಿದ್ರೆ ರೈತ ಅಲ್ಲ ಎಂದಿದ್ದೀರಿ. ಬಿಡದಿಗೆ ಬಂದು ನೋಡಿ, 20 ಟನ್ ಕೊಬ್ಬರಿ ಬೆಳೆದಿದ್ದೇನೆ. ತೆಂಗು, ಬಾಳೆ, ಅಡಿಕೆಯಲ್ಲಿ 50 ಲಕ್ಷ ರೂ. ರೈತನಾಗಿ ಸಂಪಾದನೆ ಮಾಡಿದ್ದೇನೆ. ನಿಮ್ಮಿಂದ ಇದು ಸಾಧ್ಯವೇ? ಎಂದು ಟಾಂಗ್ ಕೊಟ್ಟಿದ್ದಾರೆ.