ಬೆಂಗಳೂರು: ರಾಜ್ಯ ಬಜೆಟ್‍ನಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾರೀ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೇ ಈಗ ತೈಲದ ಮೇಲಿನ ಸೆಸ್ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೈಕಲ್ ಏರಿ ಪ್ರತಿಭಟನೆ ಮಾಡಿದ್ದರು. ಆದರೆ ಈಗ ರಾಜ್ಯದ ದೋಸ್ತಿ ಸರ್ಕಾರವೇ ತೈಲ ದರ ಏರಿಕೆ ಮಾಡಿರುವುದು ಟೀಕೆಗೆ ಕಾರಣವಾಗಿದೆ.
Advertisement
ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಟೀಕೆ ಮಾಡಿ, ಫೋಟೋ, ಹೇಳಿಕೆ ಹರಿಬಿಡುತ್ತಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಕಾಂಗ್ರೆಸ್ ನಾಯಕರು ತೈಲದ ಮೇಲಿನ ಸೆಸ್ ವಾಪಾಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.