ಹುಬ್ಬಳ್ಳಿ: ಚುನಾವಣೆ ಪ್ರಚಾರದ ವಿಚಾರವಾಗಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ. ಆರೋಗ್ಯದ ದೃಷ್ಠಿಯಿಂದ ಸಿಎಂ ಬೆಂಗಳೂರು ಸಮೀಪದ ಮಂಡ್ಯ ಹಾಗೂ ರಾಮನಗರದಲ್ಲಿ ಮಾತ್ರ ಪ್ರಚಾರ ಮಾಡಬಹುದು ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
ಹುಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಜಮಖಂಡಿ ಹಾಗೂ ಬಳ್ಳಾರಿ ಕ್ಷೇತ್ರಗಳ ಚುನಾವಣೆ ಪ್ರಚಾರಕ್ಕೆ ಬಂದರೂ ಬರಬಹುದು. ಮೈತ್ರಿ ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ಐದು ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ನಮ್ಮ ಜೊತೆ ಪ್ರಚಾರಕ್ಕೆ ಬರುತ್ತಿದ್ದಾರೆ ಎಂದು ತಿಳಿಸಿದರು.
Advertisement
Advertisement
ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗುಡುಗಿದ ಡಿಸಿಎಂ ಪರಮೇಶ್ವರ್, ಬಿಜೆಪಿಯವರು ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ ಪ್ರಚಾರ ಬಿಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ. ಈಗಾಗಲೇ ಗೆದ್ದಿದ್ದರೆ ಪ್ರಚಾರ ಯಾಕೆ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟ ಅವರು, ಐದು ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಬಿರುಸಾಗಿದೆ. ನಾನು ಮೊದಲೇ ಹೇಳಿದಂತೆ ಐದು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದರು.
Advertisement
ಜಮಖಂಡಿ ಕ್ಷೇತ್ರದಲ್ಲಿ ಮೊದಲ ಹಂತದ ಪ್ರಚಾರ ಪೂರ್ಣಗೊಳಿಸಿರುವೆ. ಭಾನುವಾರದಿಂದ ಎರಡನೇ ಹಂತದ ಪ್ರಚಾರ ಮಾಡುತ್ತೆನೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಮೈತ್ರಿಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಬಳ್ಳಾರಿಯಲ್ಲಿ ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ನಾವೇ ಗೆಲ್ಲುತ್ತೆವೆ ಎಂದ ಅವರು, 371-(ಜೆ)ಗೆ ಸಂಬಂಧಿಸಿದ ಯಾವುದೇ ಅನುದಾನ ನಮ್ಮ ಸರ್ಕಾರ ಕಡಿತ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‍ನಲ್ಲಿ ಮೀಸಲಿಟ್ಟಿದ್ದ ಹಣವನ್ನು ಮುಂದುವರಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv