ಚಿಕ್ಕ ವಯಸ್ಸಿನಿಂದಲೇ ರಾಮಾಯಣ, ಮಹಾಭಾರತ ತಿಳ್ಕೊಂಡಿದ್ದೀನಿ – ಪ್ರತಾಪ್ ಸಿಂಹಗೆ ಹೆಚ್‍ಡಿಕೆ ತಿರುಗೇಟು

Public TV
1 Min Read
HDK 1

ಮಂಡ್ಯ: ನಾನು ಚಿಕ್ಕ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಕುಮಾರಸ್ವಾಮಿ ಅವರು, ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ ಹೇಳಿದ್ದರು. ಇದಕ್ಕೆ ಸಂಸದ ಪ್ರತಾಪ್ ಸಿಂಹ ಅವರು, ನಾನು ಕುಮಾರಸ್ವಾಮಿ ಅವರ ಮಾತನ್ನು ಸಂಪೂರ್ಣ ಒಪ್ಪುತ್ತೇನೆ. ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ ತಲೆಯನ್ನು ತುಂಬಿಸುತ್ತದೆ. ಸತ್ಯದ ದಾರಿಯಲ್ಲಿ ಸಾಗುವುದನ್ನು ಕಲಿಸುತ್ತದೆ. ಕುಟುಂಬ ರಾಜಕಾರಣ ಮಾಡಬಾರದು. ನನಗೆ ಎಲ್ಲಾ ಅಧಿಕಾರ ಬೇಕು ಎನ್ನುವ ಮನಸ್ಥಿತಿಯನ್ನು ಬದಲಾಯಿಸುತ್ತದೆ. ಈ ಕಾರಣಕ್ಕೆ ಮಕ್ಕಳಿಗೆ ಭಗವದ್ಗೀತೆ ಅವಶ್ಯಕತೆ ಇದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಕುಲಪತಿಗಳ ಸರ್ಕಾರಿ ಬಂಗಲೆಗೆ ಬೇಕಾಬಿಟ್ಟಿ ಖರ್ಚು – ಕುಲಪತಿ ಮೇಲೆ ಗಂಭೀರ ಆರೋಪ

PRATHAP SIMHA 3

ಸದ್ಯ ಈ ವಿಚಾರವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಬಿಜೆಪಿ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಮಾಡುತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದೇನೆ. ಮಾನವೀಯತೆ, ತಾಯಿಯ ಹೃದಯವನ್ನು ಇಟ್ಟುಕೊಂಡು ಜೀವನ ಮಾಡುತ್ತಿದ್ದೇವೆ. ಬಿಜೆಪಿ ಅವರಿಂದ ತಿಳುವಳಿಕೆಯನ್ನು ಕಲಿಯುವ ಅಗತ್ಯವಿಲ್ಲ. ಅಂತಹ ತಿಳುವಳಿಕೆ ಕಲಿತರೆ ಸಮಾಜ ಹಾಳಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್‍ಸಿಂಹ

Share This Article
Leave a Comment

Leave a Reply

Your email address will not be published. Required fields are marked *