ಬಳ್ಳಾರಿ: ಹೆಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲು ದೇವರ ಶಾಪವೇ ಕಾರಣವಾಯ್ತಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಕುಮಾರಸ್ವಾಮಿ ಅವರು ಮಂಗಳವಾರ ರಾತ್ರಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ನಂತರ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುಮಾರಸ್ವಾಮಿ ದೇವರ ಶಾಪ ಎಚ್‍ಡಿಕೆಗೆ ತಟ್ಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
Advertisement
Advertisement
ಲೋಕಸಭಾ ಚುನಾವಣೆಗೆ ಮೊದಲು ಎಚ್‍ಡಿಕೆ ಸಂಡೂರುಗೆ ಭೇಟಿ ನೀಡಿದ್ದರು. ಸಂಡೂರು ಶ್ರೀ ಕುಮಾರಸ್ವಾಮಿ ದೇಗುಲದ ಸುತ್ತ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಜಿಂದಾಲ್ ಕಂಪನಿಗೆ ಗಣಿಗಾರಿಕೆ ಮಾಡಲು ಅವಕಾಶ ನೀಡಿದ್ದಕ್ಕೆ ತಕ್ಕ ಶಾಸ್ತಿ ಆಗಿದೆ ಎಂದು ಅಲ್ಲಿನ ಜನ ಮಾತನಾಡಿಕೊಳ್ಳುತ್ತಿದ್ದಾರೆ.
Advertisement
ಅಲ್ಲದೆ ಶ್ರೀ ಕುಮಾರಸ್ವಾಮಿ ದೇವರ ಶಾಪವೇ ನಿಮ್ಮ ಈ ಸ್ಥಿತಿಗೆ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‍ಗಳು ಕೂಡ ರಾರಾಜಿಸುತ್ತಿವೆ. ಮತ್ತೆ ಯಾರಾದರೂ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೆಚ್‍ಡಿಕೆಗೆ ಆದ ಶಾಸ್ತಿ ಅವರಿಗೂ ಆಗುತ್ತೆ ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.