ಮಂಡ್ಯ: ಎಚ್.ಡಿ.ಕುಮರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.
ಮಂಡ್ಯ ನಗರದ ಸಂಜಯ ವೃತ್ತ ಸೇರಿದಂತೆ ಹಲವೆಡೆ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಒದಗಿಸಲಾಗಿದೆ. ಮಂಡ್ಯ ಜೆಡಿಎಸ್‍ನ ಭದ್ರಕೋಟೆಯಾಗಿದ್ದು ಜಿಲ್ಲೆಯ 7 ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರೇ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ.
Advertisement
Advertisement
ಮಂಗಳವಾರ ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯ ಮಾಡಿದ್ದರು. ಈ ವೇಳೆ ಒಟ್ಟು 20 ಶಾಸಕರು ಗೈರಾಗಿದ್ದರು. ಕಾಂಗ್ರೆಸ್ಸಿನ 14, ಜೆಡಿಎಸ್‍ನ 3, ಇಬ್ಬರು ಪಕ್ಷೇತರ ಶಾಸಕರ ಜೊತೆ ಬಿಎಸ್‍ಪಿಯ ಎನ್. ಮಹೇಶ್ ಗೈರಾಗಿದ್ದರು. ದೋಸ್ತಿ ಪಕ್ಷದ ಒಟ್ಟು 99 ಶಾಸಕರು ಹಾಜರಾಗಿದ್ದು, ಬಿಜೆಪಿಯ 105 ಶಾಸಕರು ಹಾಜರಾಗಿದ್ದರು.
Advertisement
ವಿಶ್ವಾಸಮತಯಾಚನೆ ವೇಳೆ ಸರ್ಕಾರದ ಪರವಾಗಿ 99 ಮತಗಳು ಬಿದ್ದರೆ ವಿರುದ್ಧವಾಗಿ 105 ಮತಗಳು ಬಿದ್ದವು. ಈ ಮೂಲಕ ಕುಮಾರಸ್ವಾಮಿ ಸಲ್ಲಿಸಿದ್ದ ವಿಶ್ವಾಸ ಮತಯಾಚನೆ ಬಿದ್ದು ಹೋಗಿತ್ತು. ವಿಶ್ವಾಸ ಮತಯಾಚನೆಯಲ್ಲಿ ಸೋತ ಬಳಿಕ ಕುಮಾರಸ್ವಾಮಿ ನೇರವಾಗಿ ರಾಜಭವನಕ್ಕೆ ಹೋಗಿ ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡಿದ್ದರು.