Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ಕೆಲವೊಂದನ್ನು ಬಿಡಬೇಕು, ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ – ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಕುಮಾರಸ್ವಾಮಿ ಕೆಲವೊಂದನ್ನು ಬಿಡಬೇಕು, ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ – ರೇವಣ್ಣ

Hassan

ಕುಮಾರಸ್ವಾಮಿ ಕೆಲವೊಂದನ್ನು ಬಿಡಬೇಕು, ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ – ರೇವಣ್ಣ

Public TV
Last updated: September 17, 2019 12:21 pm
Public TV
Share
2 Min Read
REVANNA HDK
SHARE

ಹಾಸನ: ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲದ ಕಾರಣ ಕೆಲವೊಂದನ್ನು ಬಿಡಬೇಕು. ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾವುದಕ್ಕೂ ಬಾರದವರನ್ನು ಶಾಸಕ, ಮಂತ್ರಿ, ಸಂಸರನ್ನಾಗಿ ಮಾಡಿದ್ದಾರೆ. ಮಾಡಿದ ತಪ್ಪಿಗೆ ಈಗ ಕುಮಾರಸ್ವಾಮಿ ಅನುಭವಿಸುತ್ತಿದ್ದಾರೆ. ಇವೆಲ್ಲ ಎಲ್ಲಿದ್ದವು? ಇವೆಲ್ಲವನ್ನು ನಾನು ಹತ್ತಿರಕ್ಕೆ ಸೇರಿಸಲ್ಲ. ಕುಮಾರಸ್ವಾಮಿಯದ್ದು ಸ್ವಲ್ಪ ದೊಡ್ಡ ಗುಣ, ಆಯ್ಯೋ ಅಂತಾ ಬಂದರೆ ತಥಾಸ್ತು ಅಂದು ಬಿಡುತ್ತಾನೆ. ಆಮೇಲೆ ಅವರೆಲ್ಲರೂ ಕುಮಾರಸ್ವಾಮಿಗೆ ಟೋಪಿ ಹಾಕಿ ಹೋಗುತ್ತಾರೆ ಎಂದು ಜೆಡಿಎಸ್ ಬಿಟ್ಟವರ ವಿರುದ್ಧ ಕಿಡಿಕಾರಿದರು.

ಕೆಲವರು ಬೀಗರ ಊಟವನ್ನೇ ಹುಡುಕಿಕೊಂಡು ತಿರುಗುತ್ತಿದ್ದಾರೆ. ಎಲ್ಲಿ, ಯಾರ ಮನೆಯಲ್ಲಿ ಬೀಗರ ಊಟ ಇದೆ ಎಂದು ಹುಡುಕಿಕೊಂಡು ಓಡಾಡುತ್ತಿದ್ದಾರೆ. ಇವರಿಂದ ಕುಮಾರಸ್ವಾಮಿ ಪಾಠ ಕಲಿಯಬೇಕೇ? ರಾಜ್ಯದಲ್ಲಿ ಜೆಡಿಎಸ್ ಪಕ್ಷ ತನ್ನದೇ ಆದ ಅಸ್ತಿತ್ವ ಉಳಿಸಿಕೊಂಡಿದೆ. ಇದನ್ನು ರಾಷ್ಟ್ರೀಯ ಪಕ್ಷಗಳು ತೆಗೆಯಲು ಒಳಸಂಚನ್ನು ಮಾಡುತ್ತಿವೆ. ಆದರೆ ಈ ಎರಡೂ ರಾಷ್ಟ್ರೀಯ ಪಕ್ಷಗಳು ಇದರಲ್ಲಿ ಯಶಸ್ಸು ಕಾಣುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.

siddu 1

ರಾಷ್ಟ್ರೀಯ ಪಕ್ಷಗಳು ಏನೇ ಮಾಡಿದರು ಇದರಲ್ಲಿ ಯಶಸ್ವಿಯಾಗುವುದಿಲ್ಲ. ಇಂತಹ ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತುಂಬಾ ದಿನಗಳಿಂದ ನೋಡಿದ್ದಾರೆ. ಜೆಡಿಎಸ್‍ನ ಮುಗಿಸಲು ಯಾರಿಂದಲೂ ಆಗಲ್ಲ. ಜನತೆ, ದೇವರ ಆಶೀರ್ವಾದ ಇರೋವವರೆಗೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ದೇವೇಗೌಡರು ಇವೆಲ್ಲವನ್ನೂ ಎದುರಿಸಿಯೇ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾರೆ. ಕಾಲವೇ ಎಲ್ಲವನ್ನೂ ನಿರ್ಧರಿಸುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ಶಕ್ತಿ ಜೆಡಿಎಸ್‍ಗೆ ಇದೆ. ಜನರೇ ಎರಡು ರಾಷ್ಟ್ರೀಯ ಪಕ್ಷಗಳಿಗೆ ಉಗಿಯುವ ಕಾಲ ಬರಲಿದೆ. ಜೆಡಿಎಸ್ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಜೆಡಿಎಸ್ ಮುಗಿಸಲು ಕಚೇರಿಯನ್ನು ಕಿತ್ತುಕೊಂಡರು. ಈಗ ಒಳ್ಳೆಯ ಕಚೇರಿ ಕಟ್ಟಿಲ್ಲವೇ, ಅಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು

ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ 48 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಆಗುತ್ತಿರಲಿಲ್ಲ. ತೆಂಗು, ಆಲೂಗಡ್ಡೆ ಬೆಳೆಗಾರರಿಗೆ ಪರಿಹಾರ, ಗೃಹಲಕ್ಷ್ಮಿ ಯೋಜನೆ, ಒಂದು ಸಾವಿರ ಇಂಗ್ಲಿಷ್ ಶಾಲೆಗಳನ್ನು ತೆರೆಯಲಾಗಿದೆ. ಇದೀಗ ದಳದಲ್ಲಿ ತಳಮಳ ಎನ್ನುತ್ತಾರೆ. ಆದರೆ ಇಲ್ಲಿ ಯಾವ ತಳನು ಇಲ್ಲ ಮಳನು ಇಲ್ಲ ಎಂದು ತಿರುಗೇಟು ನೀಡಿದರು.

CM BSY

ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು. ಕುಮಾರಸ್ವಾಮಿ ಸಾಲಮನ್ನಾ ಮಾಡಿರುವ ಹಣವನ್ನೇ ತಡೆಹಿಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ದೇವೇಗೌಡರು ತೀರ್ಮಾನ ಮಾಡುತ್ತಾರೆ. ಕೋಮುವಾದಿ ಪಕ್ಷ ದೂರವಿಡಲು ಒಂದಾಗುವುದಾದರೆ ದೇವೇಗೌಡರು, ಕುಮಾರಸ್ವಾಮಿ ನಿರ್ಧರಿಸುತ್ತಾರೆ. ದೇವೇಗೌಡರು, ಕುಮಾರಸ್ವಾಮಿ ಅವರ ತೀರ್ಮಾನವೇ ಅಂತಿಮ ಎಂದರು.

ಡಿ.ಕೆ.ಶಿವಕುಮಾರ್ ಕಷ್ಟದಲ್ಲಿದ್ದಾನೆ, ರಾಜ್ಯದಲ್ಲಿ ಡಿಕೆಶಿ ಒಬ್ಬನೇನಾ ದುಡ್ಡು ಮಾಡಿರೋದು, ನಾನು ದೇವೇಗೌಡರು ಡಿಕೆಶಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೆಲವರು ಬೆಳಿಗ್ಗೆ ಎದ್ದರೆ ಸಿದ್ದರಾಮಯ್ಯ ರಾತ್ರಿ ಆದರೆ ಯಡಿಯೂರಪ್ಪ ಮನೆಯ ಬಾಗಿಲು ತಟ್ಟುತ್ತವೆ. ಅವು ಕುಮಾರಸ್ವಾಮಿ ಯಾಕೆ ಡಿಕೆಶಿ ದರೋಡೆ ಮಾಡಿದಾ ಅಂತಾ ಹೇಳುತ್ತವೆ. ಅಂತಹವರು ಡಿ.ಕೆ.ಶಿವಕುಮಾರ್ ಉಳಿಸುತ್ತಾರಾ, ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಚೆಲುವರಾಯಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.hdk cheluvarayaswamy

ಬೇರೆಯವರಾಗಿದ್ದರೆ ಇಡಿ ಅಧಿಕಾರಿಗಳು ನೀಡುವ ಕಾಟವನ್ನು ತಾಳಲಾರದೆ, ಇಷ್ಟೊತ್ತಿಗೆ ಬಿಜೆಪಿಗೆ ಹೋಗಿ ಶರಣಾಗುತ್ತಿದ್ದರು. ಡಿಕೆಶಿ ಮತ್ತು ಡಿ.ಕೆ.ಸುರೇಶ್‍ಗೆ ಒಳ್ಳೆಯ ಶಕ್ತಿ ಇದೆ ಬೇರೆಯವರನ್ನು ಗೆಲ್ಲಿಸುವ ಶಕ್ತಿ ಇದೆ. ಹೀಗಾಗಿ ಅವರು ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

TAGGED:bjpcongressDK Shivakumarhd kumaraswamyHD RewannajdsPublic TVಎಚ್ ಡಿ ಕುಮಾರಸ್ವಾಮಿಎಚ್ ಡಿ ರೇವಣ್ಣಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

NAVAMI
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
58 minutes ago
Republic Day Celebration 2
Bengaluru City

ರಾಜ್ಯದಲ್ಲೆಡೆ 77ನೇ ಗಣರಾಜ್ಯೋತ್ಸವದ ಸಂಭ್ರಮ – ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ

Public TV
By Public TV
1 hour ago
CM CUP
Bengaluru City

ಫೆ.21, 22 ರಂದು ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ – `ಸಿಎಂ ಕಪ್‌ 2026’ರ ಜೆರ್ಸಿ ಅನಾವರಣ

Public TV
By Public TV
1 hour ago
Lakshmi Hebbalkar
Districts

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ – ಅದು ನನ್ನ ಭಾಗ್ಯ ಎಂದ ಹೆಬ್ಬಾಳ್ಕರ್‌

Public TV
By Public TV
1 hour ago
Shubhanshu Shukla
Latest

ಗಗನಯಾತ್ರಿ ಶುಭಾಂಶು ಶುಕ್ಲಾಗೆ ʻಅಶೋಕ ಚಕ್ರʼ ಪ್ರದಾನ

Public TV
By Public TV
2 hours ago
Ankola DOG 1
Districts

ಸರ್ಕಾರಿ ಅಧಿಕಾರಿಯ ನಿಸ್ವಾರ್ಥ ಸೇವೆ – ದೇಶದ ಗಡಿ ಕಾಯುತ್ತಿವೆ ಅಂಕೋಲದ 40 ಶ್ವಾನಗಳು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?