Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡ್ತಿದ್ದಾರೆ: ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡ್ತಿದ್ದಾರೆ: ಹೆಚ್‍ಡಿಕೆ ಕಿಡಿ

Districts

ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡ್ತಿದ್ದಾರೆ: ಹೆಚ್‍ಡಿಕೆ ಕಿಡಿ

Public TV
Last updated: October 8, 2021 4:14 pm
Public TV
Share
4 Min Read
kumarswamy
SHARE

-ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ

ರಾಮನಗರ/ಚನ್ನಪಟ್ಟಣ: ಸಿದ್ದರಾಮಯ್ಯ ಅವರ ರೀತಿ ಕುಲಗೆಟ್ಟ ರಾಜಕೀಯ ನಾನು ಮಾಡುವುದಿಲ್ಲ. ಅಲ್ಪಸಂಖ್ಯಾತರು ಗೆಲ್ಲುವ ಕಡೆ ಅಂದರೆ ಜೆಡಿಎಸ್ ಪಕ್ಷಕ್ಕೆ ಮತ ಹಾಕಿ ಎಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಅಪಪ್ರಚಾರ ನಡೆಸುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದಿದ್ದಾರೆ.

SIDDARAMYA

ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಬಿಟ್ಟು ಮಾತನಾಡಲು ಬೇರೆ ವಿಷಯ ಇಲ್ಲ. ಅವರ ರಾಜಕೀಯ ನನಗೆ ಬೇಸರ ತರಿಸಿದೆ. ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಂ ಅಂತಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಹಾಕಿದ್ದಾರೆ ಅಂತಾರೆ. ಆರೋಪಗಳಿಗೂ ಒಂದು ಮಿತಿ ಬೇಡವೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: RSS ವಿರುದ್ಧ ಮಾತಾಡಿದರೆ ಕಾಂಗ್ರೆಸ್ ನಿರ್ನಾಮ ಆಗುತ್ತೆ: ರೇಣುಕಾಚಾರ್ಯ

HDK 1

ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪಗಳ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ರೀತಿ ಕುಲಗೆಟ್ಟ ರಾಜಕೀಯ ನಾನು ಮಾಡುವುದಿಲ್ಲ. ಅಲ್ಪಸಂಖ್ಯಾತರು ಜೆಡಿಎಸ್ ಗೆಲ್ಲುವ ಕಡೆ ಜೆಡಿಎಸ್ ಪಕ್ಷಕ್ಕೆ ಮತ ಹಾಕಿ, ಕಾಂಗ್ರೆಸ್ ಗೆಲ್ಲುವ ಕಡೆ ಆ ಪಕ್ಷಕ್ಕೆ ಮತ ಹಾಕಿ ಎಂದು ನಾನು ಹೇಳಿರುವುದು ನಿಜ. ಜೆಡಿಎಸ್ ಕಾರ್ಯಾಗಾರದಲ್ಲಿ ನಾನೇ ಹೇಳಿದ್ದೆ. ಜೆಡಿಎಸ್ ಪಕ್ಷ ಎಲ್ಲಿ ಸ್ಟ್ರಾಂಗ್ ಇದೆ ಅಲ್ಲಿ ಪಕ್ಷ ಬೆಂಬಲಿಸಿ. ಎಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದೆ ಇದೆ ಅಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಬೆಂಬಲಿಸಿ ಅಂತ ಮುಕ್ತವಾಗಿ ಹೇಳಿದ್ದೇನೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಅವರು ಸ್ಪಷ್ಟವಾಗಿ ನುಡಿದಿದ್ದಾರೆ.

Siddaramaiah 1 2

ಕಾಂಗ್ರೆಸ್ ಪಕ್ಷದ ನಾಯಕರಿಗೆ ಹೃದಯ ವೈಶಾಲ್ಯತೆ ಇಲ್ಲ. ಅದರ ಬದಲಿಗೆ ನಮ್ಮ ಪಕ್ಷವನ್ನೇ ಮುಗಿಸುವ ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಜ್ಯಾತ್ಯತೀತ ಶಕ್ತಿಗಳು ಉಳಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನ ಬೆಂಬಲಿಸಿ ಅಂತ ಹೇಳಿದ್ದೇನೆ. ಆದರೆ, ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿ ತಮ್ಮ ಕೀಳುಮಟ್ಟದ ರಾಜಕೀಯ ಏನೂ ಎಂಬುದನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: 8 ಜಿಲ್ಲೆಗಳಲ್ಲಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲು ಕ್ರಮ: ಬೊಮ್ಮಾಯಿ

ಆರ್.ಎಸ್.ಎಸ್ ಬಗ್ಗೆ ನೀಡಿರುವ ಹೇಳಿಕೆಗೆ ಬದ್ಧ:
ಆರ್‍ಎಸ್‍ಎಸ್‍ ಬಗ್ಗೆ ನಾನು ಕೊಟ್ಟಿರುವ ಹೇಳಿಕೆಗೆ ಬದ್ಧನಾಗಿದ್ದೇನೆ. ವಾಸ್ತವ ಸಂಗತಿಗಳನ್ನು ಮಾತ್ರ ಹೇಳಿದ್ದೇನೆ. ಆರ್‌ಎಸ್‌ಎಸ್‌ ಪ್ರಚಾರಕರೊಬ್ಬರು ಹೇಳಿರುವ ಮಾತುಗಳನ್ನು ನಾನು ಉಲ್ಲೇಖ ಮಾಡಿದ್ದೇನೆ. ಬೇಕಿದ್ದರೆ ನನ್ನ ಹೇಳಿಕೆ ವಿರೋಧ ಮಾಡುವವರು ಸಾರ್ವಜನಿಕವಾಗಿ ಚರ್ಚೆಗೆ ಬರಲಿ. ನಾನು ಸಿದ್ದನಿದ್ದೇನೆ. ಬಿಜೆಪಿ ಹಾಗೂ ಆರ್‍ಎಸ್‍ಎಸ್‍ನಾಯಕರು ಬರಲಿ ಎಂದು ಖಾರವಾಗಿ ನುಡಿದರು. ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

ಇದೇ ವೇಳೆ ಸ್ವಾತಂತ್ರ್ಯ ಬಂದಾಗ ಆರ್‌ಎಸ್‌ಎಸ್‌ ಇಲ್ಲದಿದ್ದರೆ ಭಾರತವು ಪಾಕಿಸ್ತಾನ ಆಗುತ್ತಿತ್ತು ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿರುವ ಬಗ್ಗೆ ಪ್ರಶ್ನಿಸಿದಾಗ, ಸ್ವಾತಂತ್ರ್ಯ ಬಂದಾಗ ಈಶ್ವರಪ್ಪ ಅವರು ಹುಟ್ಟಿದ್ರಾ? ಯಾರ, ಯಾರ ಕೊಡುಗೆ, ಏನೇನು ಇದೆ ಎಂದು ಈಶ್ವರಪ್ಪ ಅವರಿಗೇನು ಗೊತ್ತು? ಎಂದು ಟಾಂಗ್ ಕೊಟ್ಟಿದ್ದಾರೆ.

vamogga eshwarappa 5

ಕಾಶ್ಮೀರದಲ್ಲಿ ಶಾಲೆಗೆ ನುಗ್ಗಿ ಭಯೋತ್ಪಾದಕರು ಶಿಕ್ಷಕರನ್ನ ಸುಟ್ಟಿದ್ದಾರೆ. ದೇವೇಗೌಡರು ಪ್ರಧಾನಿ ಆಗಿದ್ದ ವೇಳೆ ದೇಶದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸಿದ ಒಂದೇ ಒಂದು ಘಟನೆ ನಡೆದಿತ್ತಾ? ಕಳೆದ 4 ದಿನಗಳಲ್ಲಿ ಕಾಶ್ಮೀರದಲ್ಲಿ ಪಂಡಿತರು, ಶಿಕ್ಷಕರು, ನಾಗರಿಕರನ್ನು ಭಯೋತ್ಪಾದಕರು ಗುಂಡಿಟ್ಟು ಕೊಂದಿದ್ದಾರೆ. ಕಾಂಗ್ರೆಸ್ ನಾಯಕರ ಜೊತೆಗೆ ಬಿಜೆಪಿ ನಾಯಕರು ವಾದ ಮಾಡಿದ ಹಾಗೆ ನನ್ನ ಬಳಿ ಚರ್ಚೆ ಬೇಡ. ನಾನು ದಾಖಲೆ, ಆಧಾರ ಇಟ್ಟುಕೊಂಡು ಮಾತನಾಡಿದ್ದೇನೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಸೇರಿಕೊಂಡು ಕಾಶ್ಮೀರವನ್ನು ಹಾಳು ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

HDD 3

ಉಪ ಚುನಾವಣೆಯಲ್ಲಿ ಗೆಲ್ಲುತ್ತೇವೆ:
ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಎರಡು ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಇದೆ. ಸಿಂದಗಿಯಲ್ಲಿ ನಮ್ಮ ಅಭ್ಯರ್ಥಿ ಗೆಳ್ಳುವುದು ಖಚಿತ. ಹಾನಗಲ್‍ನಲ್ಲಿ ಗಟ್ಟಿ ಪೈಪೋಟಿ ನೀಡಲಿದ್ದೇವೆ ಹಾಗೂ ಅಲ್ಲಿಯೂ ನಮ್ಮ ಪರವಾಗಿಯೇ ಅಲೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಹೆಚ್‍ಡಿಕೆ ಗೆ RSS ಸಂಸ್ಕಾರ ಗೊತ್ತಿಲ್ಲ: ಶ್ರೀರಾಮುಲು

ನಮ್ಮ ಪಕ್ಷವನ್ನು 2023ಕ್ಕೆ ಅಧಿಕಾರಕ್ಕೆ ತರಲು ಕಾರ್ಯಾಗಾರಗಳನ್ನು ಮಾಡಿದ್ದೇನೆ. ಇದರ ಭಾಗವಾಗಿ ದೇಶಗಳಲ್ಲಿ ನಡೆಯುತ್ತಿರುವ ಘಟನೆಗಳನ್ನು ಜನತೆ ಮುಂದೆ ಇಡಲು ಪ್ರಾರಂಭ ಮಾಡಿದ್ದೇನೆ. ಇದು ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ಕಾರ್ಯಾಗಾರಗಳನ್ನು ಮಾಡುವ ಮೂಲಕ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡುತ್ತೇನೆ. ಉಪ ಚುನಾವಣೆಯಲ್ಲಿ ಯಾರನ್ನೊ ಓಲೈಸಿಕೊಳ್ಳಲು ಈ ಕಾರ್ಯಾಗಾರ ಮಾಡಿಲ್ಲ. ಓಲೈಸೊ ರಾಜಕಾರಣ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಬಿಟ್ಟಿದ್ದು. ಹಿಂದುತ್ವದ ಹೆಸರಿನಲ್ಲಿ ಸಂದೇಶ ಕೊಡಲು ಬಿಜೆಪಿ ಹೊರಟಿದೆ. ಹಿಂದುತ್ವದ ರಾಜಕಾರಣ ಮಾಡಿಕೊಂಡು ಮತಗಳಿಗೋಸ್ಕರ ನಾನು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

TAGGED:bjpcongressjdsKumaraswamyPublic TVramanagararsssiddaramaiahಆರ್‍ಎಸ್‍ಎಸ್ಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಪಬ್ಲಿಕ್ ಟಿವಿಬಿಜೆಪಿರಾಮನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
28 seconds ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
7 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
17 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
24 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
27 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?