ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣ (Prajwal Pendrive Case) ಭಾರೀ ಕೋಲಾಹಲ ಎಬ್ಬಿಸಿದೆ. ಈ ಸಂಬಧ ಇಂದು ಹೆಚ್‍ಡಿಕೆ ನೇತೃತ್ವದ ಜೆಡಿಎಸ್ (JDS) ನಿಯೋಗವು ರಾಜಭವನದ ಕದ ತಟ್ಟಿದೆ.
ಹೌದು. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಸಂಬಂಧ ಕುಮಾರಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ವೇಳೆ ಹೆಚ್‍ಡಿಕೆಗೆ ಕೆಲ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಸಾಥ್ ನೀಡಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಪಾರದರ್ಶಕ ತನಿಖೆ ಆಗಬೇಕು. ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದೆ ಅಂತಾ ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಆಡಳಿತ ನಡೆಸಿದವರ ಕುಟುಂಬದಿಂದ ಇಂಥ ಕೃತ್ಯ ಆಯ್ತಲ್ಲಾ ಎಂಬ ನೋವಿದೆ: ಶಿವಲಿಂಗೇಗೌಡ
ಇದೇ ವೇಳೆ ಕುಮಾರಸ್ವಾಮಿಯವರು (HD Kumaraswamy) ಪೆನ್‍ಡ್ರೈವ್ ಪ್ರಕರಣ ಸಂಬಂಧ ಕಳೆದ ಒಮದು ವಾರದಿಂದ ಆದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ವಿವರಣೆ ನೀಡಿದರು. ಇನ್ನು ವಿಡಿಯೋ ಬಿಡುಗಡೆ ಮಾಡಿದ ಪ್ರಮುಖ ಆರೋಪಿ ಬೆಂಗಳೂರಿನಲ್ಲಿದ್ದು, ಅವನಿಗೆ ಸರ್ಕಾರದಿಂದಲೇ ರಾಜ ಮರ್ಯಾದೆ ಸಿಗುತ್ತಿದೆ. ಇದರ ಹಿಂದೆ ಸರ್ಕಾರದ ಪ್ರಭಾವಿ ನಾಯಕರ ಕೈವಾಡ ಇದೆ. ಕೈವಾಡ ಇರೋ ಆಡಿಯೋ ಮಾಧ್ಯಮಗಳಲ್ಲಿ ಬಂದಿದೆ. ಹೀಗಾಗಿ ಎಸ್‍ಐಟಿ ಇಂದ ನಿಷ್ಪಕ್ಷಪಾತವಾಗಿ ತನಿಖೆ ಆಗ್ತಿಲ್ಲ ಎಂದು ರಾಜ್ಯಪಾಲರ ಮುಂದೆ ಹೆಚ್‍ಡಿಕೆ ದೂರಿದ್ದಾರೆ.
ಇಷ್ಟು ಮಾತ್ರವಲ್ಲದೇ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಮಧ್ಯಪ್ರವೇಶ ಮಾಡುವಂತೆ ಹೆಚ್ ಡಿಕೆ ರಾಜ್ಯಪಾಲರನ್ನು (Governor) ಆಗ್ರಹಿಸಿದರು.