DistrictsKarnatakaLatestLeading NewsMain Post

ಚುನಾವಣೆಗೆ ಟಿಆರ್‌ಎಸ್‌ ಜೊತೆ ಜೆಡಿಎಸ್‌ ಮೈತ್ರಿ – ಎಚ್‌ಡಿಕೆ ಅಧಿಕೃತ ಘೋಷಣೆ

ಹೈದರಾಬಾದ್‌: 2023ರ ಕರ್ನಾಟಕ ವಿಧಾನಸಭೆ(Karnataka Election) ಮತ್ತು 2024ರ ಲೋಕಸಭಾ ಚುನಾವಣೆಗೆ ಜೆಡಿಎಸ್- ಟಿಆರ್‌ಎಸ್(JDS TRS) ಮೈತ್ರಿ ಮಾಡಿಕೊಂಡಿದೆ.

ಹೈದರಾಬಾದ್‌ನಲ್ಲಿ ಕೆ ಚಂದ್ರಶೇಖರ್‌ ರಾವ್‌(KCR) ಅವರ ರಾಷ್ಟ್ರೀಯ ಪಕ್ಷ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದ ಎಚ್‌ಡಿ ಕುಮಾರಸ್ವಾಮಿ(HD Kumaraswamy) ಮೈತ್ರಿ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಕೇರಳ, ತಮಿಳುನಾಡು, ಅಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮೈತ್ರಿ ಜೊತೆಗೆ ಚುನಾವಣೆ ಎದುರಿಸುವುದಾಗಿ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿಯನ್ನು ರಾಜ್ಯದಲ್ಲೂ ತರಲು ನಾನು, ಕೆಸಿಆರ್ ನಿರ್ಧಾರ ಮಾಡಿದ್ದೇವೆ. 2023ರ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ಹೊರತಾದ ಸ್ವತಂತ್ರ ಸರಕಾರ ತರಲು ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ನಮಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕೆಸಿಆರ್ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರ್ಕಾರ ಬೇಕು. ಈ ನಿಟ್ಟಿನಲ್ಲಿ ನಾವಿಬ್ಬರೂ ಚರ್ಚಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಭಾರತ್ ರಾಷ್ಟ್ರ ಸಮಿತಿ – ರಾಷ್ಟ್ರೀಯ ಪಕ್ಷ ಪ್ರಾರಂಭಿಸಿದ KCR

ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್ ಎಸ್ ಸ್ಥಾಪನೆಯನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ. ಬಿಆರ್ ಎಸ್ ಸ್ಥಾಪನೆ ಬಗ್ಗೆ ಎಚ್‌ಡಿ ದೇವೇಗೌಡ ಮತ್ತು ನನ್ನ ಜತೆ ಕೆಸಿಆರ್ ಸಮಾಲೋಚಿಸಿದ್ದರು. ಕೆಲ ದಿನಗಳ ಹಿಂದೆ ಸ್ವತಃ ನಾನೇ ಹೈದರಾಬಾದ್ʼಗೆ ತೆರಳಿ ಚರ್ಚಿಸಿದ್ದೆ. ನಮ್ಮನ್ನು ಪರಿಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಈ ದಿಟ್ಟಹೆಜ್ಜೆ ಇರಿಸಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button