ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ (Kumbh Mela) ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರದ (T Narasipura) ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ.
ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದ್ದರೆ, ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಟಿ.ನರಸೀಪುರದ ತ್ರಿವೇಣಿ ಸಂಗಮ ಹೆಸರುವಾಸಿಯಾಗಿದೆ. ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದನ್ನೂ ಓದಿ: Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ
Advertisement
Advertisement
ಇನ್ನು ಇಂದು ಬೆಳಗ್ಗೆ 10 ಗಂಟೆಗೆ ಅಗಸ್ತೇಶ್ವರ ದೇವಸ್ಥಾನದಲ್ಲಿ ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ
Advertisement
ಫೆ.11ರಂದು, ಚತುರ್ದಶಿ, ಆಶ್ಲೇಷ, ಪ್ರಾತಃ ಪುಣ್ಯಾಹ – ನವಗ್ರಹ ಹೋಮ, ಸುದರ್ಶನ ಹೋಮ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ, ಸಂಜೆ 4ಕ್ಕೆ ಮಹಾತ್ಮರ, ಸಂತರ, ಮಹಾ ಮಂಡಲೇಶ್ವರರ ತ್ರಿವೇಣಿ ಸಂಗಮ ಕ್ಷೇತ್ರ ಪ್ರವೇಶ, ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದಿಂದ ಟಿ.ನರಸೀಪುರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ರುದ್ರ ಹೋಮ, ಪೂರ್ಣಾಹುತಿ, ರಾತ್ರಿ 7 ಗಂಟೆಗೆ ನಡೆಯುವ ಗಂಗಾ ಪೂಜೆಯ ವೇಳೆ ವಾರಾಣಸಿ ಗಂಗಾರತಿ ಮಾದರಿಯಲ್ಲಿ ದೀಪಾರತಿ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ಕಾರು-ಇನ್ನೋವಾ ನಡುವೆ ಭೀಕರ ಅಪಘಾತ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
Advertisement
ಕುಂಭಮೇಳದಲ್ಲಿ ವಿವಿಧ ಮಠಾಧೀಶರು, ರಾಜಕೀಯ ಗಣ್ಯರು ಭಾಗವಹಿಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಕುಂಭಮೇಳದ ಉದ್ಘಾಟನೆ ಮಾಡಲಿದ್ದು, ಸಚಿವರಾದ ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್, ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಚಾಮರಾಜನಗರ| ಚಾಲಕನಿಗೆ ಮೂರ್ಛೆ; ಮರಕ್ಕೆ ಡಿಕ್ಕಿಯಾದ ಬಸ್
ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೇರಿದಂತೆ ಹರಗುರುಚರ ಮೂರ್ತಿಗಳು ಕಾರ್ಯಕ್ರಮಗಳ ಸಾನಿಧ್ಯ ವಹಿಸಲಿದ್ದಾರೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್