ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಕೋಚ್ ಸ್ಥಾನಕ್ಕೆ ಅರ್ಜಿ ಹಾಕುವಂತೆ ಭಾರತದ ದಿಗ್ಗಜರಾದ ಅನಿಲ್ ಕುಂಬ್ಳೆ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿಗೆ ಬಿಸಿಸಿಐ ಸೂಚಿಸಬಹುದು ಎಂದು ವರದಿಯಾಗಿದೆ.
Advertisement
ಈ ಬಾರಿಯ ಟಿ20 ವಿಶ್ವಕಪ್ ಬಳಿಕ ಈಗಿನ ಕೋಚ್ ರವಿ ಶಾಸ್ತ್ರಿ ಅವಧಿ ಪೂರ್ಣಗೊಳ್ಳಲಿದ್ದು, ಕೋಚ್ ಹುದ್ದೆಗೆ ಕುಂಬ್ಳೆ ಅಥವಾ ಲಕ್ಷ್ಮಣ್ ಗೆ ಬಿಸಿಸಿಐ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
Advertisement
Advertisement
ಭಾರತದ ದಿಗ್ಗಜ ಬೌಲರ್ ಕರ್ನಾಟಕದ ಅನಿಲ್ ಕುಂಬ್ಳೆ ಈ ಹಿಂದೆ 2016-2017ರಲ್ಲಿ ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ನಾಯಕ ವಿರಾಟ್ ಕೊಹ್ಲಿ ಹಾಗೂ ಕುಂಬ್ಳೆ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇತ್ತು. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಪಾಕಿಸ್ಥಾನದ ವಿರುದ್ಧ ಹೀನಾಯವಾಗಿ ಸೋಲು ಕಂಡಿತ್ತು. ಇದನ್ನೂ ಓದಿ:ನಾಳೆಯಿಂದ ದುಬೈನಲ್ಲಿ ಐಪಿಎಲ್ ಕಲರವ
Advertisement
ಪಾಕಿಸ್ಥಾನದ ವಿರುದ್ಧ ಸೋಲಿನ ಬಳಿಕ ಅನಿಲ್ ಕುಂಬ್ಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದು ಈಗ ಇತಿಹಾಸ. ಬಿಸಿಸಿಐ ಬಾಸ್ ಆಗಿರುವ ಸೌರವ್ ಗಂಗೂಲಿ ಕೋಚ್ ಹುದ್ದೆಗೆ ಕುಂಬ್ಳೆ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಕುಂಬ್ಳೆ ಹುದ್ದೆಯನ್ನು ನಿರಾಕರಿಸಿದರೆ ವಿವಿಎಸ್ ಲಕ್ಷ್ಮಣ್ ಮುಂದಿನ ಆಯ್ಕೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಾಸ್ಕ್ ಹಾಕಿ, ಲಸಿಕೆ ಪಡೆಯಿರಿ- ಧೋನಿ ಕ್ಯಾಂಪೇನ್
ಪ್ರಸ್ತುತ ಐಪಿಎಲ್‍ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಮೆಂಟರ್ ಆಗಿ ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಟೀಂ ಇಂಡಿಯಾದ ಕೋಚ್ ಯಾರಗಲಿದ್ದಾರೆ ಎಂಬ ಪ್ರಶ್ನೆಗೆ ವಿಶ್ವಕಪ್ ನಂತರ ಉತ್ತರ ಸಿಗಲಿದೆ.