ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ (Sanchita Ugale) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಟಿ ಸಂಚಿತಾ ಅವರು ತಮ್ಮ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂಡಸ್ಟ್ರಿಗೆ ಶಾಕ್ ಕೊಟ್ಟ ಸಲ್ಮಾನ್ ಖಾನ್ ಬಾಲ್ಡ್ ಲುಕ್
ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಸದ್ಯ ಅಚೋಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 194 ರ ಅಡಿಯಲ್ಲಿ ಅಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
ಸಂಚಿತಾ ಉಗಲೆ ಸಿನಿ ಪಯಣ:
ಸಂಚಿತಾ ಹಿಂದಿಯ ದಿಲ್‌ವಾಲಿ ದುಲ್ಹಾ ಲೇ ಜಾಯೇಗಿ ಧಾರಾವಾಹಿಯಲ್ಲಿ ಸುಕೂನ್ ಎಂಬ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಮನೆಮಾತಾಗಿದ್ದರು. ಇದರೊಂದಿಗೆ ಅವರು ಛಾವಾ ಚಿತ್ರದಲ್ಲಿ ತಾರಾಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇತ್ತ ಕುಂಕುಮ ಭಾಗ್ಯ ಮತ್ತು ವಾಗ್ಲೆ ಕಿ ದುನಿಯಾ ಎನ್ನುವ ಸೀರಿಸ್‌ಗಳಲ್ಲೂ ಕೂಡ ನಟಿಸಿ ಜನಪ್ರಿಯತೆ ಗಳಿಸಿದ್ದರು. ಇದನ್ನೂ ಓದಿ: ಮತ್ತೊಂದು ಮದುವೆಯಾದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಾಜಿ ಪತಿ
