ಐಜ್ವಾಲ್: ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕುಮ್ಮನಂ ರಾಜಶೇಖರನ್ ಅವರು ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಮುಖಂಡರಾಗಿರುವ ಕುಮ್ಮನಂ ರಾಜಶೇಖರನ್ ಅವರು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯಲಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್‍ನ ಮುಖಂಡ ಶಶಿ ತರೂರ್ ಅವರನ್ನು ಎದುರಿಸಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
Advertisement
President has accepted resignation of Kummanam Rajasekharan (in file pic) as Guv of Mizoram. Prof Jagdish Mukhi, Guv of Assam to discharge the functions of the Guv of Mizoram, in addition to his own duties, until regular arrangements for the office of the Guv of Mizoram is made. pic.twitter.com/nNErmMmyJ0
— ANI (@ANI) March 8, 2019
Advertisement
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕುಮ್ಮನಂ ರಾಜಶೇಖರನ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಅಧಿಕಾರಿಗಳ ಮೂಲದಿಂದ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಮಿಜೋರಾಂಗೆ ರಾಜ್ಯಪಾಲರನ್ನು ನೇಮಿಸುವವರೆಗೆ ಅಸ್ಸಾಂ ರಾಜ್ಯಪಾಲ ಜಗದೀಶ್ ಮುಖಿ ಹೆಚ್ಚುವರಿ ಹೊಣೆ ವಹಿಸಿಕೊಳ್ಳಲಿದ್ದಾರೆ.
Advertisement
ಈ ಬೆಳವಣಿಗೆಯಿಂದಾಗಿ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕುಮ್ಮನಂ ರಾಜಶೇಖರನ್ ಹಾಗೂ ಶಶಿ ತರೂರ್ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv