Belgaum

ಬೆಳಗಾವಿಯಲ್ಲಿ ಪ್ರವಾಹದ ವಾತಾವರಣ – ಕುಂದರಗಿ ಸ್ವಾಮೀಜಿ ಸೇರಿ ನಾಲ್ವರ ರಕ್ಷಣೆ

Published

on

Share this

ಬೆಳಗಾವಿ: ಗೋಕಾಕ್ ತಾಲೂಕಿನಲ್ಲಿ ಪ್ರವಾಹದ ವಾತಾವರಣ ಸೃಷ್ಟಿಯಾಗಿದ್ದು ನೀರಿನಲ್ಲಿ ಸಿಲುಕಿಕೊಂಡಿದ್ದ ಕುಂದರಗಿ ಅಡವಿ ಸಿದ್ದೇಶ್ವರ ಮಠದ ಸ್ವಾಮೀಜಿ ಸೇರಿ ನಾಲ್ವರನ್ನು ಎನ್‌ಡಿಆರ್‌ಎಫ್‌ ತಂಡ ರಕ್ಷಣೆ ಮಾಡಿದೆ. ಜೊತೆಗೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮುನವಳ್ಳಿಯ ನವಿಲು ತೀರ್ಥ ಡ್ಯಾಂನಿಂದ ನೀರನ್ನು ಹೊರಕ್ಕೆ ಬಿಡುಗಡೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಬಹುತೇಕ ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅದೇ ರೀತಿ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮವು ಜಲಾವೃತವಾಗಿದೆ. ಗ್ರಾಮದ ಅಡವಿ ಸಿದ್ದೇಶ್ವರ ಮಠಕ್ಕೂ ಕೂಡ ನೀರು ನುಗ್ಗಿದ್ದು, ಈ ವೇಳೆ ಮಠದಲ್ಲಿಯೇ ಇದ್ದ ಮಠದ ಸ್ವಾಮೀಜಿ ಮತ್ತು ನಾಲ್ವರನ್ನು ಎನ್‍ಡಿಆರ್‍ಎಫ್ ತಂಡದ ಸದಸ್ಯರು ಮತ್ತು ಪೊಲೀಸರು ಬೋಟ್ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.

ನವಿಲು ತೀರ್ಥ ಡ್ಯಾಂನಿಂದ ನೀರು ಬಿಡುಗಡೆ:
ಖಾನಾಪುರ ಅರಣ್ಯ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಮುನವಳ್ಳಿಯ ನವಿಲು ತೀರ್ಥ ಡ್ಯಾಂನಿಂದ 2 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಕ್ಕೆ ಬಿಡಲಾಗಿದೆ. ಶುಕ್ರವಾರ ಮುನವಳ್ಳಿ ಬಳಿಯಲ್ಲಿ ಮಲಪ್ರಭಾ ನದಿಯಲ್ಲಿ ಅಡ್ಡಲಾಗಿ ನಿರ್ಮಿಸಿರುವ ನವಿಲು ತೀರ್ಥ ಡ್ಯಾಂನಿಂದ 2,000 ಕ್ಯೂಸೆಕ್‍ನಷ್ಟು ನೀರನ್ನು ಬಿಡುಗಡೆ ಮಾಡಲಾಗಿದೆ. ಸಂಜೆ ಹೊತ್ತಿಗೆ 5,000 ಕ್ಯೂಸೆಕ್ ನಷ್ಟು ಹೆಚ್ಚಿಗೆ ನೀರು ಬಿಡುವ ಸಾಧ್ಯತೆಯಿದೆ. ಹೀಗಾಗಿ ರಾಮದುರ್ಗ ತಾಲೂಕು, ಬಾದಾಮಿ ತಾಲೂಕು ಹಾಗೂ ಗದಗ ಜಿಲ್ಲೆಯ ನದಿ ಪಾತ್ರದ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ಈ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಅಗತ್ಯ ಮುಂಜಾಗ್ರತೆ ಕ್ರಮವನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.  ಇದನ್ನೂ ಓದಿ: ಜಲಾವೃತಗೊಂಡ ನಿಪ್ಪಾಣಿಯ ಕೋಡಣಿ ಗ್ರಾಮದ 300ಕ್ಕೂ ಹೆಚ್ಚು ಮನೆಗಳು

Click to comment

Leave a Reply

Your email address will not be published. Required fields are marked *

Advertisement
Advertisement