ತುಮಕೂರು: ಶಾಸಕರ ಬಳಿ ಆರೋಗ್ಯ ಸಮಸ್ಯೆ ಹೇಳಿಕೊಳ್ಳಲು ಬಂದ ಬಡ ಮಹಿಳೆಯೊಬ್ಬರಿಗೆ ಸ್ವತಃ ಶಾಸಕ ಡಾ.ರಂಗನಾಥ್ (Dr. Ranganath) ಅವರೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಕುಣಿಗಲ್ (Kunigal) ತಾಲೂಕಿನ ಕುಂದೂರು ಗ್ರಾಮದ ಆಶಾ ಎಂಬ ಮಹಿಳೆ ಕೀಲು ಸಮಸ್ಯೆಯಿಂದ ನೋವು ಅನುಭವಿಸುತ್ತಿದ್ದರು. ಇದನ್ನು ಶಾಸಕರ ಬಳಿ ಹೇಳಿ ಏನಾದರೂ ಸಹಾಯ ಪಡೆಯಲು ಮಹಿಳೆ ಬಂದಿದ್ದರು. ಶಾಸಕರು ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಶಾಸಕರೇ ಸ್ವತಃ ಮಹಿಳೆಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಇದನ್ನೂ ಓದಿ: PSI scam – ಇಂದು ಹೈಕೋರ್ಟ್‍ನಲ್ಲಿ ಮರುಪರೀಕ್ಷೆ ಅರ್ಜಿ ವಿಚಾರಣೆ
Advertisement
Advertisement
ಕಳೆದ 10 ವರ್ಷಗಳ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದ ಮಹಿಳೆಗೆ ಮತ್ತೆ ಸಮಸ್ಯೆಯಾಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ 2 ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಶಸ್ತ್ರಚಿಕಿತ್ಸೆ ಮಾಡಲು 4-5 ಲಕ್ಷ ರೂ. ಖರ್ಚಾಗುತ್ತಿತ್ತು. ಈಗ ಶಾಸಕರೇ ಉಚಿತ ಶಸ್ತ್ರಚಿಕಿತ್ಸೆ ನೀಡಿದ್ದಾರೆ.
Advertisement
Advertisement
ಅಲ್ಲದೇ ಇದೇ ರೀತಿಯ ಸಮಸ್ಯೆಯಿಂದ ಬಳಲುತ್ತಿರುವ 23 ಮಹಿಳೆಯರಿಗೆ ಕುಣಿಗಲ್ ಶಾಸಕ ಡಾ.ರಂಗನಾಥ್ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಶಾಸಕರು ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿದ್ದಾರೆ. ಶಾಸಕರ ಈ ಸೇವೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: 20 ದಿನ ನೋ ಪ್ರಾಬ್ಲಂ – ಮಳೆ ಬಾರದೆ ಇದ್ರೆ ಮೈಸೂರಿಗೆ ಕುಡಿಯುವ ನೀರಿಗೆ ಹಾಹಾಕಾರ ನಿಶ್ಚಿತ!