– ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನಿಯಂತ್ರಣಾ ರೇಖೆಯ ಬಳಿ ಸೇನಾ ನೆಲೆ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ 3 ಯೋಧರು ಹುತಾತ್ಮರಾಗಿದ್ದಾರೆ.
ಇಂದು ಮುಂಜಾನೆ 4 ಗಂಟೆಯ ವೇಳೆಗೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಯೋಧರು ಮತ್ತು ಉಗ್ರರ ಮಧ್ಯೆ 4 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಯೋಧರ ಕಾರ್ಯಾಚರಣೆ ಮುಂದುವರೆದಿದೆ.
Advertisement
ಕಳೆದ ವರ್ಷ ಉರಿ ಸೇನಾ ನೆಲೆಯ ಮೇಲೆ ಪಾಕಿಸ್ತಾನದಿಂದ ನುಸುಳಿ ಬಂದ ಉಗ್ರರು ನಡೆಸಿದ ದಾಳಿಯಲ್ಲಿ 19 ಯೋಧರು ಹುತಾತ್ಮರಾಗಿದ್ದರು.
Advertisement
#UPDATE: Three Army personnel lost their lives in #Kupwara attack; 2 terrorists killed. Search operation on pic.twitter.com/cEZ7q3gIum
— ANI (@ANI_news) April 27, 2017