ಬೆಳಗಾವಿ: ʼಕನಿಷ್ಟ ಬೆಂಬಲ ಬೆಲೆ ರೈತರಿಗೆ ಏಕೆ ಬೇಕು?ʼ ಎಂಬ ವಿಚಾರವಾಗಿ ಚರ್ಚಿಸಲು ಏ.29ರಂದು ಬೆಂಗಳೂರಿನಲ್ಲಿ ಚಿಂತನ ಮಂಥನ ಸಂವಾದ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಉತ್ಪನ್ನಗಳಿಗೆ ಎಂಎಸ್‍ಪಿ ನಿಗದಿಗೊಳಿಸದೇ, ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಈ ವಿಷಯವಾಗಿ ಕೃಷಿ ಪರಿಣಿತರು ರೈತ ಮುಖಂಡರ ನೇತೃತ್ವದಲ್ಲಿ ಸಂವಾದ ನಡೆಸಲಾಗುವುದು. ರೈತರಿಗೆ ಎಂ.ಎಸ್.ಪಿ ಅಗತ್ಯದ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ
Advertisement
Advertisement
ಕಬ್ಬಿನಿಂದ ಬರುವ ಎಥೆನಾಲ್ ಉತ್ಪಾದನೆ, ಆದಾಯ ನೀತಿ ನಿಯಮಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಈ ಸಮಿತಿ ಶೀಘ್ರದಲ್ಲಿಯೇ ಉತ್ತರ ಪ್ರದೇಶದ ಲಕ್ನೋ ಹಾಗೂ ಕಾನ್ಪುರದ ಕಬ್ಬು ಸಂಶೋಧನಾ ಕೇಂದ್ರ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಲವ್ ಕೇಸರಿಗೆ ಕರೆಕೊಟ್ಟು ಪ್ರಚೋದನಕಾರಿ ಭಾಷಣ ಪ್ರಕರಣ – ಇಬ್ಬರು ಆರೋಪಿಗಳ ಬಂಧನ
Advertisement
ರಾಜ್ಯದಲ್ಲಿ 70 ಸಕ್ಕರೆ ಕಾರ್ಖಾನೆಗಳಿವೆ. ಕಬ್ಬು ಪೂರೈಸಿದ ರೈತರಿಗೆ 2022ರ ಫೆಬ್ರವರಿಯಿಂದ ಈವರೆಗೆ 3,500 ಕೋಟಿ ರೂ. ಬಿಲ್ ಬರಬೇಕಿದೆ. ಅದಕ್ಕೆ ಶೇ.15 ಬಡ್ಡಿ ಸೇರಿಸಿ ಬಿಲ್ ಪಾವತಿಸುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
Advertisement
ರಾಮದುರ್ಗ ತಾಲೂಕಿನಲ್ಲಿ ವೀರಭದ್ರೇಶ್ವರ ನೀರಾವರಿ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಯೋಜನೆಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡಿಲ್ಲ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ರೈತರಿಗೆ ಪರಿಹಾರ ಒದಗಿಸಿ, ಕಾಮಗಾರಿಗೆ ವೇಗ ನೀಡಬೇಕು. ಇಲ್ಲದಿದ್ದರೆ ಮೇ ಮೊದಲ ವಾರ ಸಾಲಹಳ್ಳಿ ಬಳಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.