ಬೆಂಗಳೂರು: ಪಂಜಾಬಿನ (Punjab) ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಅವರನ್ನು ಇಂದು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ (Bengaluru) ಕರೆತರಲಾಗಿದೆ.
ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ. ಇದನ್ನೂ ಓದಿ: ದರ ಏರಿಕೆ ಎಫೆಕ್ಟ್ – ವೀಕೆಂಡ್‌ನಲ್ಲಿಯೂ ನಮ್ಮ ಮೆಟ್ರೋ ಖಾಲಿ ಖಾಲಿ
ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಅಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನೂ ಓದಿ: 2 ಜೀವಗಳನ್ನ ಬಲಿ ಪಡೆದಿದ್ದ, ಇಡೀ ಗ್ರಾಮದ ಜನರನ್ನೇ ಕಾಡಿದ್ದ ಸಲಗ ಕೊನೆಗೂ ಸೆರೆ
ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಇದನ್ನೂ ಓದಿ: ಎಲಾನ್ ಮಸ್ಕ್ ಅವರ 13ನೇ ಮಗುವಿಗೆ ಜನ್ಮ ನೀಡಿದ್ದೇನೆ: ಆಶ್ಲೇ ಹೇಳಿಕೆಗೆ ಮೌನ ಮುರಿದ ಮಸ್ಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಶನಿವಾರ ಏರ್ ಅಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ – 10 ಮೊಬೈಲ್, 20,000 ರೂ. ದೋಚಿದ ಖದೀಮರು