ಟಾಲಿವುಡ್ ನಟಿ ಸಮಂತಾ (Samantha) ಇಂದು (ಏ.28) 37ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಈ ವೇಳೆ, ಸಮಂತಾ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಕೈಯಲ್ಲಿ ಗನ್ ಹಿಡಿದು ರಕ್ತಸಿಕ್ತ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಸಮಂತಾ ನಟನೆಯ ಹೊಸ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ.
ಸಮಂತಾ ನಟನೆಯ ‘ಬಂಗಾರಮ್’ (Bangaram Film) ಸಿನಿಮಾದ ಪೋಸ್ಟರ್ ರಿವೀಲ್ ಆಗಿದೆ. ಕೈಯಲ್ಲಿ ಗನ್ ಹಿಡಿದು ಖಡಕ್ ಆಗಿ ಲುಕ್ ಕೊಟ್ಟಿದ್ದಾರೆ. ಹಣೆಯಲ್ಲಿ ಕುಂಕುಮ ಕತ್ತಲ್ಲಿ ತಾಳಿ ಕೆಂಪು ಬಣ್ಣದ ಸೀರೆಯುಟ್ಟು ರಕ್ತಸಿಕ್ತ ಅವತಾರದಲ್ಲಿ ಸಮಂತಾ ಕಾಣಿಸಿಕೊಂಡಿದ್ದಾರೆ.
‘ಬಂಗಾರಮ್’ ಸಿನಿಮಾದ ಶೂಟಿಂಗ್ ಸದ್ಯದಲ್ಲೇ ಶುರು ಆಗಲಿದೆ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಪೋಸ್ಟರ್ ನೋಡಿದ್ರೆ ಇದೊಂದು ಆ್ಯಕ್ಷನ್ & ಮಾಸ್ ಸಿನಿಮಾ ಎಂಬುದು ತಿಳಿಯುತ್ತಿದೆ. ಸದ್ಯದಲ್ಲೇ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ. ಸ್ಯಾಮ್ ನ್ಯೂ ಲುಕ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಪರಭಾಷೆಯಲ್ಲಿ ಕನ್ನಡತಿ ರುಕ್ಮಿಣಿ ವಸಂತ್‌ಗೆ ಭಾರೀ ಬೇಡಿಕೆ
View this post on Instagram
ಅಂದಹಾಗೆ, ವಿವಾದ, ಅನಾರೋಗ್ಯ, ಯಶಸ್ಸು ಎಲ್ಲವೂ ಅನುಭವಿಸಿರುವ ಜೀವ ಸಮಂತಾ. ನಾಗಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಮಂತಾ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಎಲ್ಲಾ ವಿಚಾರಕ್ಕೂ ಸಮಂತಾ ಕಡೆಯೇ ಬೆಟ್ಟು ಮಾಡಿ ತೋರಿಸುತ್ತಿದ್ದರು. ಸಹವಾಸವೇ ಬೇಡ ಅಂತ ವೃತ್ತಿರಂಗದಲ್ಲಿ ಬ್ಯುಸಿಯಾದರು. ‘ಪುಷ್ಪ’ (Pushpa) ಚಿತ್ರದಲ್ಲಿ ಸೊಂಟ ಬಳುಕಿಸಿದ ಮೇಲೆ ಸಮಂತಾ ಲಕ್ ಬದಲಾಯ್ತು.
ಆದರೆ ‘ಯಶೋದ’ ಮತ್ತು ‘ಖುಷಿ’ ಸಿನಿಮಾ ಆದ್ಮೇಲೆ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡಿರಲಿಲ್ಲ. ಎರಡೂ ಹೀನಾಯವಾಗಿ ಸೋತ ಚಿತ್ರಗಳು. ಸೋಲಿನ ಹೊಡೆತಕ್ಕೆ ಅನಾರೋಗ್ಯದ ಆಘಾತ ಎರಡನ್ನೂ ಸಹಿಕೊಳ್ಳೋಕೆ ಸ್ಯಾಮ್‌ಗೆ 8 ತಿಂಗಳು ಹಿಡಿಯಿತು. ಇದೀಗ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ವರುಣ್ ಧವನ್‌ಗೆ ನಾಯಕಿಯಾಗಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ‘ಹನಿ ಬನಿ’ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.